Home Mangalorean News Kannada News ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣಕ್ಕೆ ಕ್ರಮ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣಕ್ಕೆ ಕ್ರಮ: ಗೃಹ ಸಚಿವ ಡಾ.ಜಿ. ಪರಮೇಶ್ವರ್

Spread the love

ಚಿಕ್ಕಮಗಳೂರು ಕಲ್ಲು ತೂರಾಟ ಪ್ರಕರಣಕ್ಕೆ ಕ್ರಮ: ಗೃಹ ಸಚಿವ ಡಾ.ಜಿ. ಪರಮೇಶ್ವರ್

ಮಂಗಳೂರು: ಚಿಕ್ಕಮಗಳೂರಿನಲ್ಲಿ ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾನೂನು ಪ್ರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಹೇಳಿದರು. ಪೀಡಿತ ಹೆಣ್ಣುಮಗಳು ದಲಿತ ಸಮುದಾಯಕ್ಕೆ ಸೇರಿದವರು ಎಂಬ ಮಾಹಿತಿ ಲಭ್ಯವಾಗಿದ್ದು, ಅದರ ಅನ್ವಯ ಪ್ರಕರಣವನ್ನು ಪಿಸಿಆರ್ ಕಾಯ್ದೆಯಡಿ ದಾಖಲಿಸಲಾಗುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಅವರು ಯಾಕೆ ಹೋಗುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಅವರ ಸ್ವಂತ ಹಣದಲ್ಲಿ ಅವರು ಎಲ್ಲಿಗೆ ಬೇಕಾದರೂ ಹೋಗಬಹುದು. ಆಸ್ಟ್ರೇಲಿಯಾ ಸೇರಿದಂತೆ ಎಲ್ಲೆಡೆ ಕೃಷಿ ಇದೆ. ಬಜೆಟ್ ತಯಾರಿಸುವುದು ಮುಖ್ಯಮಂತ್ರಿ ಮತ್ತು ಹಣಕಾಸು ಇಲಾಖೆಯ ಕೆಲಸ. ಸಿಎಲ್‌ಪಿ ಸಭೆಯಲ್ಲಿ ಶಾಸಕರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಅದನ್ನೆಲ್ಲಾ ಕ್ರೋಡೀಕರಿಸಿ ಬಜೆಟ್ ಸಿದ್ಧಪಡಿಸಲಾಗುತ್ತದೆ. ಶಾಸಕರು ಎಲ್ಲಿ ಬೇಕಾದರೂ ಹೋಗಬಹುದು, ಬರಬಹುದು. ನಮ್ಮಲ್ಲಿ ಯಾವುದೇ ಕದನವಿಲ್ಲ,” ಎಂದು ಹೇಳಿದರು.

ಆರ್‌ಎಸ್‌ಎಸ್ ಕುರಿತು ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅದು ಅವರ ವೈಯಕ್ತಿಕ ಅಭಿಪ್ರಾಯ. ಆರ್‌ಎಸ್‌ಎಸ್ ಬಗ್ಗೆ ಅವರಿಗೆ ಅವರದೇ ಆದ ಅಭಿಪ್ರಾಯವಿದೆ. ಅದಕ್ಕೆ ನನ್ನ ಹೇಳಿಕೆ ಅಗತ್ಯವಿಲ್ಲ,” ಎಂದು ಸ್ಪಷ್ಟಪಡಿಸಿದರು.

ಸಚಿವ ಎಚ್.ಸಿ. ಮಹದೇವಪ್ಪ ಅವರು ದಲಿತ ಸಿಎಂ ಕುರಿತು ನೀಡಿರುವ ಹೇಳಿಕೆ ಬಗ್ಗೆ ಮಾತನಾಡಿದ ಡಾ. ಪರಮೇಶ್ವರ್, “ಮಹದೇವಪ್ಪ ಸಮರ್ಥರು. ಯಾವುದೇ ಜವಾಬ್ದಾರಿ ಕೊಟ್ಟರೂ ನಿರ್ವಹಿಸುವ ಸಾಮರ್ಥ್ಯ ಅವರಿಗೆ ಇದೆ. ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಕೆಲವರು ತಮ್ಮ ನಾಯಕರೆಂದು ಆರಿಸಿಕೊಳ್ಳುತ್ತಾರೆ. ಅದನ್ನು ತಪ್ಪು ಎಂದು ಹೇಳಲು ಸಾಧ್ಯವಿಲ್ಲ. ಆದರೆ ಪಕ್ಷದಲ್ಲಿ ಒಂದು ವ್ಯವಸ್ಥೆ, ಹೈಕಮಾಂಡ್ ಇದೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳುತ್ತದೆ. ಯಾರೋ ಕೆಲವರು ಜೈಕಾರ ಹಾಕಿದರೆ ಸಾಕಾಗುವುದಿಲ್ಲ,” ಎಂದು ಹೇಳಿದರು.

ಪ್ರಸ್ತುತ ದಲಿತ ಸಿಎಂ ವಿಚಾರದಲ್ಲಿ ಯಾವುದೇ ಚರ್ಚೆ ನಡೆಯುತ್ತಿಲ್ಲ. ಸರ್ಕಾರ ಆಡಳಿತದ ಮೇಲೆ ಗಮನ ಕೇಂದ್ರೀಕರಿಸಿದೆ ಎಂದು ಅವರು ತಿಳಿಸಿದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version