Spread the love
ಅಡ್ಯಾರ್ ಕಣ್ಣೂರು: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ
ಮಂಗಳೂರು : ನಗರ ಹೊರವಲಯದ ರಾ. ಹೆ. 73ರ ಅಡ್ಯಾರ್ ಕಣ್ಣೂರಿನಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಅಡ್ಯಾರ್ ಕಣ್ಣೂರಿನ ಮಸೀದಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲೇ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದೊಡನೆ ಅಗ್ನಿ ಶಾಮಕ ದಳದ ಅಧಿಕಾರಿ ಮತ್ತು ಸಿಬ್ಬಂದಿ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಲಾರಿಯು ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಿಲಿಂಡರ್ ಸಾಗುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆಯಿಂದ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ಥಗೊಂಡಿದ್ದು, ಪರ್ಯಾಯ ರಸ್ತೆಗಳ ಮೂಲಕ ಕಳುಹಿಸಲು ಸಂಚಾರ ಪೊಲೀಸರು ಕ್ರಮ ಕೈಗೊಂಡರು.
Spread the love













