ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕ

Spread the love

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ನೇಮಕ

ಉಡುಪಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ ಸಂಘಟನೆಯನ್ನು ಸಕ್ರಿಯಗೊಳಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೆ ಹೊಸ ನೇಮಕಾತಿ ಮಾಡಲಾಗಿದೆ.

ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್ ಅವರ ನಿರ್ದೇಶನದಂತೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ, ಅಕ್ಷತ್ ಪೈ ಅವರನ್ನು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾಧ್ಯಕ್ಷರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹೊಸ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಅಕ್ಷತ್ ಪೈ ಅವರು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ರವರ,ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಅಧ್ಯಕ್ಷರಾದ ಶ್ರೀ ಮಂಜುನಾಥ್ ಗೌಡರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಯುವ ಕಾಂಗ್ರೆಸ್ ಉಸ್ತುವಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಸ್ಥಳೀಯ ನಾಯಕರ ಸಹಕಾರದೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಕಾರ್ಯನಿರ್ವಹಿಸುವಂತೆ ಕೋರಲಾಗಿದೆ.


Spread the love