ದೆಹಲಿಯಲ್ಲಿ ಎಚ್.ಡಿ. ಕುಮಾರಸ್ವಾಮಿ ಭೇಟಿಯಾದ ಅಕ್ಷಿತ್ ಸುವರ್ಣ : ದಕ ಜಿಲ್ಲೆಯಲ್ಲಿ ಜೆಡಿಎಸ್ ಸಂಘಟನೆ ಬಲವರ್ಧನೆ ಕುರಿತು ಚರ್ಚೆ
ಮಂಗಳೂರು: ದೆಹಲಿಯಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಭೇಟಿ ಮಾಡಿದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷದ ಸಂಘಟನೆ, ಬಲವರ್ಧನೆ ಹಾಗೂ ಮುಂದಿನ ದಿನಗಳಲ್ಲಿ ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಸದೃಢಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.
ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯನ್ನು ಮತ್ತಷ್ಟು ಚುರುಕುಗೊಳಿಸುವುದು, ಹೆಚ್ಚಿನ ಸಂಖ್ಯೆಯಲ್ಲಿ ಯುವ ಕಾರ್ಯಕರ್ತರನ್ನು ಪಕ್ಷದ ಸಂಘಟನೆಯೊಂದಿಗೆ ಬೆಸೆಯುವುದು ಹಾಗೂ ಜೆಡಿಎಸ್ನ ಸಿದ್ಧಾಂತ ಮತ್ತು ಕಾರ್ಯಕ್ರಮಗಳನ್ನು ಜನರ ಬಳಿಗೆ ಪರಿಣಾಮಕಾರಿಯಾಗಿ ತಲುಪಿಸುವ ಕುರಿತು ಕುಮಾರಸ್ವಾಮಿ ಅವರಿಂದ ಮಾರ್ಗದರ್ಶನ ಪಡೆಯಲಾಯಿತು.
