ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು

Spread the love

ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ನಗರದ ಪ್ರೆಸ್‌ಕ್ಲಬ್ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪಕ್ಕೆ ಸಂಬಂಧಿಸಿ ಮೂವರು ಸೇರಿದಂತೆ ಇತರರ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ಅಪರಾಹ್ನ ಪುತ್ತೂರು ಪ್ರೆಸ್‌ಕ್ಲಬ್ ಮುಂಭಾಗದಲ್ಲಿ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ ಕೆಲವರು ಪರಸ್ಪರ ಕೈ ಕೈ ಮಿಲಾಯಿಸಿ ಗಲಾಟೆ ನಡೆಸುತ್ತಿದ್ದು, ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ.

ಪೊಲೀಸರು ತಿಳುವಳಿಕೆ ನೀಡಿದರೂ ಗಲಾಟೆ ಮುಂದುವರಿಸಿದ ಹಿನ್ನೆಲೆಯಲ್ಲಿ ಮುಂಡೂರು ಗ್ರಾಮದ ಪ್ರವೀಣ್‌ ಆಚಾರ್ಯ, ಕೂರ್ನಡ್ಕದ ರವೂಫ್, ಬೋಳ್ವಾರದ ಹಕೀಂ ಸೇರಿದಂತೆ ಇತರರ ವಿರುದ್ಧ ಅ.ಕ್ರ. 104/2026, BNS ಕಲಂ 194(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments