ಕಡಬದಲ್ಲಿ ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ ಆರೋಪ: ಸೊಸೆಯ ವಿರುದ್ಧ ಪ್ರಕರಣ ದಾಖಲು

Spread the love

ಕಡಬದಲ್ಲಿ ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ ಆರೋಪ: ಸೊಸೆಯ ವಿರುದ್ಧ ಪ್ರಕರಣ ದಾಖಲು

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವೃದ್ಧೆಯೊಬ್ಬರಿಗೆ ಜೀವ ಬೆದರಿಕೆ ಹಾಕಿ, ಕಲ್ಲು ಎಸೆದು ಗಾಯಗೊಳಿಸಿದ ಹಾಗೂ ಮನೆಯ ಕಿಟಕಿ ಗಾಜಿಗೆ ಹಾನಿ ಮಾಡಿದ ಆರೋಪದ ಮೇಲೆ ಸೊಸೆಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಬ ತಾಲೂಕಿನ ಕೊಯಿಲ ನಿವಾಸಿ ನೀಲಮ್ಮ (70) ಅವರು ನೀಡಿದ ದೂರಿನ ಪ್ರಕಾರ, ಅವರ ಸೊಸೆ ಮಂಗಳಾ ಬಾಯಿ ಅವರು ಅ. 12ರಂದು ಸಂಜೆ ನೀಲಮ್ಮ ಅವರ ಮನೆಗೆ ಬಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಜೀವ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.

ನಂತರ ಅ. 14ರಂದು ರಾತ್ರಿ ಆರೋಪಿತೆ ಮನೆಯ ಕಿಟಕಿಯ ಗಾಜಿಗೆ ಕಲ್ಲು ಎಸೆದು ಹಾನಿ ಮಾಡಿದ್ದಲ್ಲದೆ, ಅದೇ ಕಲ್ಲಿನಿಂದ ನೀಲಮ್ಮ ಅವರಿಗೆ ಗಾಯವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಘಟನೆಯಿಂದ ಸುಮಾರು 30,000 ರೂ. ನಷ್ಟವಾಗಿದ್ದು, ಆರೋಪಿತೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಗಾಯಗೊಂಡ ನೀಲಮ್ಮ ಅವರು ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 118/2026ರಡಿ ಭಾರತೀಯ ನ್ಯಾಯ ಸಂಹಿತೆಯ ಕಲಂ 352, 351(2), 118(1) ಮತ್ತು 324(4)ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love
Subscribe
Notify of

0 Comments