ಪುತ್ತೂರಿನಲ್ಲಿ ದಾಖಲೆ ಝೆರಾಕ್ಸ್ ವೇಳೆ ಗಲಾಟೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ – ಎರಡೂ ಕಡೆಯಿಂದ ದೂರು

Spread the love

ಪುತ್ತೂರಿನಲ್ಲಿ ದಾಖಲೆ ಝೆರಾಕ್ಸ್ ವೇಳೆ ಗಲಾಟೆ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ – ಎರಡೂ ಕಡೆಯಿಂದ ದೂರು

ಪುತ್ತೂರು: ದಾಖಲೆಗಳ Xerox ಹಾಗೂ Lamination ಮಾಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ನಡೆಸಿದ ಘಟನೆ ಪುತ್ತೂರು ದರ್ಭೆ ಪ್ರದೇಶದಲ್ಲಿರುವ “Dream Destination Digital Seva Kendra” ಅಂಗಡಿಯಲ್ಲಿ ನಡೆದಿದೆ.

ಆಗಸ್ಟ್ 21ರಂದು ಮಧ್ಯಾಹ್ನ ಸುಳ್ಯ ಮಂಡೆಕೋಲು ನಿವಾಸಿಗಳಾದ ಮುಬಾಶಿರ, ಫಾತೀಮಾ ಹಾಗೂ ಮುಬಾಶಿರ್ ಅವರು ದರ್ಭೆಯಲ್ಲಿರುವ ಅಂಜನಾ ಪೈ ಅವರ ಅಂಗಡಿಗೆ ತೆರಳಿ ಕೆಲವು ದಾಖಲೆಗಳ Xerox ಹಾಗೂ Lamination ಮಾಡಲು ನೀಡಿದ್ದರು. ಈ ಪೈಕಿ ಒಂದು ದಾಖಲೆಯು ತಾಂತ್ರಿಕ ದೋಷದಿಂದ ಸುಟ್ಟುಹೋಗಿದ್ದು, ಈ ವಿಚಾರವಾಗಿ ಮುಬಾಶಿರ, ಫಾತೀಮಾ, ಮುಬಾಶಿರ್ ಹಾಗೂ ಅಂಗಡಿ ಮಾಲಕಿ ಅಂಜನಾ ಪೈ ಮತ್ತು ಅವರ ಪುತ್ರ ಸುದರ್ಶನ್ ಪೈ ನಡುವೆ ವಾಗ್ವಾದ ನಡೆದಿದೆ. ಬಳಿಕ ಪರಸ್ಪರ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ.

ಘಟನೆ ವೇಳೆ ಸ್ಥಳದಲ್ಲಿ ಜನರು ಗುಂಪುಗೂಡಿದ್ದು, ಮಾಹಿತಿ ಪಡೆದ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಎರಡೂ ಕಡೆಯವರಿಗೆ ಠಾಣೆಗೆ ತೆರಳಿ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ.

ಈ ವೇಳೆ ವಿಚಾರಣೆಗಾಗಿ ಸುದರ್ಶನ್ ಪೈ ಅವರನ್ನು ಠಾಣೆಗೆ ಕರೆತರಲು ಮುಂದಾದಾಗ, ಸ್ಥಳದಲ್ಲಿ ಸೇರಿದ್ದ ಕೆಲವರು ಪೊಲೀಸರನ್ನು ತಡೆದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರು ದಾಖಲಾಗುತ್ತಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಬಗ್ಗೆಯೂ ಪ್ರತ್ಯೇಕ ದೂರು ದಾಖಲಿಸಿಕೊಳ್ಳಲಾಗುತ್ತಿದೆ. ಪ್ರಕರಣಗಳು ದಾಖಲಾದ ಬಳಿಕ ಸಂಪೂರ್ಣ ಮಾಹಿತಿಯನ್ನು ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ಅಂಗಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ದೃಶ್ಯಾವಳಿಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ಸುಳ್ಳು ವದಂತಿಗಳನ್ನು ಪ್ರಸಾರ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.


Spread the love
Subscribe
Notify of

0 Comments