ಉಪ್ಪಿನಂಗಡಿಯಲ್ಲಿ ಬಾರ್ ಸಮೀಪ ಗಲಾಟೆ: ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿ ಭೀತಿ ಸೃಷ್ಟಿ, ಇಬ್ಬರು ವಶಕ್ಕೆ
ಉಪ್ಪಿನಂಗಡಿ: ಬಾರ್ ಸಮೀಪ ನಡೆದ ಗಲಾಟೆಯ ವೇಳೆ ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿ ಭೀತಿ ಉಂಟುಮಾಡಿದ ಘಟನೆಗೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಅಕ್ಟೋಬರ್ 18ರಂದು ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶೆಣೈ ರಸ್ತೆಯಲ್ಲಿರುವ ಬಾರ್ ಸಮೀಪ ಮಂಜುನಾಥ್, ವಿಶ್ವನಾಥ ಹಾಗೂ ಮತ್ತೊಬ್ಬ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿದೆ.
ಈ ವೇಳೆ ಮಂಜುನಾಥ್ ಎಂಬಾತ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ ಭೀತಿ ಉಂಟುಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್ ಮತ್ತು ವಿಶ್ವನಾಥ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.













