ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನರಾಂ ಪ್ರಶಸ್ತಿಗೆ ಅರ್ಜಿ ಆಹ್ವಾನ
ಮಂಗಳೂರು: ಎಪ್ರಿಲ್ 5 ರಂದು ಡಾ.ಬಾಬು ಜಗಜೀವನರಾಂ 119ನೇ ಜನ್ಮ ದಿನಾಚರಣೆ ಹಾಗೂ ಎಪ್ರಿಲ್ 14 ರಂದು ಡಾ.ಬಿ.ಆರ್.ಅಂಬೇಡ್ಕರ್ 135ನೇ ಜನ್ಮ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2026-27ನೇ ಸಾಲಿನ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ.
ಆದುದರಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳು ಮಾರ್ಚ್ 6 ರೊಳಗೆ ಸಂಪೂರ್ಣ ಮಾಹಿತಿ ಹಾಗೂ ದಾಖಲೆಗಳನ್ನು ನಮೂನೆಯಲ್ಲಿ ಭರ್ತಿ ಮಾಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿಗೆ ನೀಡಬೇಕು.
ಹೆಚ್ಚಿನ ಮಾಹಿತಿಗೆ ಮಂಗಳೂರು ತಾಲೂಕು – 0824-2441269, ಬಂಟ್ವಾಳ- 08255-230968, ಪುತ್ತೂರು- 08251-298803, ಬೆಳ್ತಂಗಡಿ-08256-233528, ಸುಳ್ಯ- 08257-233527 ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













