ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಮಂಜುನಾಥ ಭಂಡಾರಿ ನೇಮಕ: ವಿಶ್ವಾಸ್ ಅಮೀನ್ ಅಭಿನಂದನೆ
ನವದೆಹಲಿ/ಬೆಂಗಳೂರು: ಕರ್ನಾಟಕ ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರನ್ನು ನೇಮಕಗೊಳಿಸಲಾಗಿದೆ.
ಕರ್ನಾಟಕದ ವಿವಿಧ ನಿಗಮ-ಮಂಡಳಿಗಳು ಹಾಗೂ ಪ್ರಮುಖ ಸರ್ಕಾರಿ ಹುದ್ದೆಗಳಿಗೆ 18 ಶಾಸಕರು ಮತ್ತು ಮುಖಂಡರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿಕೃತ ಆದೇಶ ಹೊರಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಮಂಜುನಾಥ ಭಂಡಾರಿ ಅವರ ನೇಮಕವನ್ನು ಉಡುಪಿ ಜಿಲ್ಲಾ ಮೀನುಗಾರಿಕಾ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಾಸ್ ಅಮೀನ್ ಅವರು ಸ್ವಾಗತಿಸಿದ್ದು ಅಭಿನಂದನೆ ಸಲ್ಲಿಸಿದ್ದಾರೆ.
| ಕ್ರಮ ಸಂಖ್ಯೆ | ನಾಯಕರ ಹೆಸರು | ನೇಮಕಗೊಂಡ ಹುದ್ದೆ / ನಿಗಮ-ಮಂಡಳಿ |
| 1 | ತನ್ವೀರ್ ಸೇಠ್ | ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ |
| 2 | ಬೇಲೂರು ಗೋಪಾಲಕೃಷ್ಣ | ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ |
| 3 | ಮಂಜುನಾಥ ಭಂಡಾರಿ | ವಿಧಾನಪರಿಷತ್ ಸರ್ಕಾರಿ ಮುಖ್ಯ ಸಚೇತಕ |
| 4 | ಬಿ. ಶಿವಣ್ಣ | ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷ |
| 5 | ಕೆ. ಷಡಕ್ಷರಿ | ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷ |
| 6 | ಪಿ.ಎಂ. ಅಶೋಕ್ | ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ |
| 7 | ಎ.ಆರ್. ಕೃಷ್ಣಮೂರ್ತಿ | ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಧ್ಯಕ್ಷ |
| 8 | ಹಂಪನಗೌಡ ಬಾದರ್ಲಿ | ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ |
| 9 | ಡಿ.ಜಿ. ಶಾಂತನಗೌಡ | ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಅಧ್ಯಕ್ಷ |
| 10 | ಜಿ.ಎಚ್. ಶ್ರೀನಿವಾಸ್ | ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಅಧ್ಯಕ್ಷ |
| 11 | ಮಹಾಂತೇಶ ಕೌಜಲಗಿ | ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (KRDCL) ಅಧ್ಯಕ್ಷ |
| 12 | ಎಸ್.ಎನ್. ಸುಬ್ಬಾರೆಡ್ಡಿ | ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) ಅಧ್ಯಕ್ಷ |
| 13 | ಎನ್.ಎಚ್. ಕೋನರಡ್ಡಿ | ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ |
| 14 | ಬಸನಗೌಡ ದದ್ದಲ್ | ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ |
| 15 | ಅಲ್ಲಮಪ್ರಭು ಪಾಟೀಲ್ | ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (KSSIDC) ಅಧ್ಯಕ್ಷ |
| 16 | ಶ್ಯಾಮ್ ನಾಟೇಕರ್ | ಕರ್ನಾಟಕ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ |
| 17 | ಎಚ್.ಸಿ. ಲಲಿತ್ ರಾಘವ್ | ಕರ್ನಾಟಕ ವಿದ್ಯುತ್ ಕಾರ್ಖಾನೆ (KAVIKA) ಅಧ್ಯಕ್ಷ |
| 18 | ಸುಭಾಷ್ ರಾಠೋಡ್ | ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ |
