ಏ. 26: ಉದ್ಯಾವರದಲ್ಲಿ ಕೊಂಕಣಿ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮ
ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಕಾರ್ಯಕ್ರಮವು 26 ಎಪ್ರಿಲ್ 2026, ಅದಿತ್ಯವಾರ ಸಂಜೆ 5.00 ಗಂಟೆಗೆ ಉಡುಪಿ ಜಿಲ್ಲೆಯ ಉದ್ಯಾವರ ಚರ್ಚ್ ವಠಾರದಲ್ಲಿ ಜರುಗಲಿರುವುದು ಎಂದು ಅಕಾಡೆಮಿ ಅಧ್ಯಕ್ಷರಾದ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಹೇಳಿದರು.
ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಶಿವರಾಜ್ ಎಸ್ ತಂಗಡಗಿಯವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿರುವರು. ಆಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ರವರ ಅಧ್ಯಕ್ಷತೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುರೇಶ್ ಶೆಟ್ಟಿ ಗುರ್ಮೆ ಹಾಗೂ ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಆ| ವಂ। ಗುರು ಜೆರಾಲ್ಡ್ ಐಸಾಕ್ ಲೋಬೊ ಇವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖಾರ್ವಿ, ಸಿದ್ದಿ, ಕುಡುಬಿ ಸಮುದಾಯದ ಸಾಂಸ್ಕೃತಿಕ ನೃತ್ಯ, ಬ್ರಾಸ್ ಬ್ಯಾಂಡ್ ಹಾಗೂ ಕೊಂಕಣಿ ಸಂಗೀತ ರಸಮಂಜರಿ ಕಾರ್ಯಕ್ರಮವು ನಡೆಯಲಿರುವುದು ಎಂದರು.
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರತಿ ವರ್ಷ ಕೊಂಕಣಿ ಸಾಹಿತ್ಯ, ಕಲೆ, ಜಾನಪದ ಈ ಮೂರು ಕ್ಷೇತ್ರಗಳಲ್ಲಿ ನಾಧನೆಗೈದ ಕೊಂಕಣಿ ಮಹನೀಯರನ್ನು ಗೌರವಿಸಲಾಗುತ್ತಿದ್ದು, ಪ್ರಸ್ತುತ ಸಾಲಿನಲ್ಲಿ 2025 ನೇ ಸಾಲಿನ ಗೌರವ ಪ್ರಶಸ್ತಿಗಾಗಿ ಹಾಗೂ ಪುಸ್ತಕ ಪುರಸ್ಕಾರಕ್ಕಾಗಿ ಈ ಕೆಳಗಿನ ಮಹನೀಯರನ್ನು ಆಯ್ಕೆ ಮಾಡಲಾಗಿದೆ.
1. 2025ನೇ ಸಾಲಿನ ಗೌರವ ಪ್ರಶಸ್ತಿ:
ಕೊಂಕಣಿ ಸಾಹಿತ್ಯ ವಿಭಾಗ : ಶ್ರೀ ರೊನ್ ರೊಚ್ ಕಾಸ್ಸಿಯಾ
ಕೊಂಕಣಿ ಕಲೆ ವಿಭಾಗ : ಶ್ರೀ ರಾಮದಾಸ ದತ್ತಾತ್ರೇಯ ಗುಲ್ವಾಡಿ
ಕೊಂಕಣಿ ಜಾನಪದ ವಿಭಾಗ : ಶ್ರೀ ಸೈರು (ಮುರಳೀಧರ) ಪುತ್ತು ನಾಯ್ಕ.
2. 2025ನೇ ಸಾಲಿನ ಪುಸ್ತಕ ಪುರಸ್ಕಾರ :
ಕೊಂಕಣಿ ಕವನ ವಿಭಾಗ : ಕವಿ – ಅಂದ್ರೂ ಎಲ್. ಡಿಕುನ್ಹಾರವರ ‘ಉಜ್ವಾಡಾಚೆ ವೆಂಗೆಂತ್” ಪುಸ್ತಕ
ಕೊಂಕಣಿ ಲೇಖನ ವಿಭಾಗ : ಲೇಖಕ- ರೋಶನ್ ಮೆಲ್ಟಿ ಸಿಕ್ಕೇರಾರವರ ‘ಕೊಂಕ್ಲಿ ಸರ್ಕಸ್’ ಪುಸ್ತಕ
ಕೊಂಕಣಿ ಸಣ್ಣಕಥೆಗಳ ವಿಭಾಗ : ಲೇಖಕ- ರಿಚರ್ಡ್ ಅಲ್ವಾರಿಸ್ರವರ “ಫಿತುರಿ” ಪುಸ್ತಕ
ಸುದ್ದಿಗೋಷ್ಠಿಯಲ್ಲಿ ಅಕಾಡೆಮಿ ಸದಸ್ಯರಾದ ನವೀನ್ ಲೋಬೊ, ಪರಿಚಯ ಸಂಘಟನೆಯ ಪ್ರಕಾಶ್ ನೊರೊನ್ಹಾ, ನಿರಂತರ್ ಉದ್ಯಾವರ ಸಂಘಟನೆಯ ಸ್ಟೀವನ್ ಕುಲಾಸೊ, ಉದ್ಯಾವರ ಚರ್ಚಿನ ಉಪಾಧ್ಯಕ್ಷರಾದ ಮೆಲ್ವಿನ್ ನೊರೊನ್ಹಾ, ಕಾರ್ಯದರ್ಶಿ ವಿಲ್ಫ್ರೇಡ್ ಡಿಸೋಜಾ ಉಪಸ್ಥಿತರಿದ್ದರು.
