ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರಂಟ್ ಆರೋಪಿಯ ಬಂಧನ

Spread the love

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರಂಟ್ ಆರೋಪಿಯ ಬಂಧನ

2013ರ ದರೋಡೆ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರಿಂದ ಬಂಧನ; ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ವಾರಂಟ್ ಆರೋಪಿಯನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಹಮ್ಮದ್ ತೌಸೀಫ್ (40), ಸೈಯದ್ ಮುಕ್ಬಾಲ್ ಅವರ ಪುತ್ರ, ಪೈವಳಿಕೆ ಟೆಂಪಲ್ ಹತ್ತಿರ, ಉಪ್ಪಳ ಅಂಚೆ, ಮಂಜೇಶ್ವರ, ಕಾಸರಗೋಡು, ಕೇರಳ ರಾಜ್ಯ ಎಂದು ಗುರುತಿಸಲಾಗಿದೆ.

ಆರೋಪಿಯ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 135/2013, ಕಲಂ 392 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಆರೋಪಿಯು ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಲಯವು ಆತನ ವಿರುದ್ಧ ಎಲ್‌ಪಿಸಿ ವಾರಂಟ್ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿ, ಆಗಸ್ಟ್ 29, 2026ರಂದು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.

ನಂತರ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಪೊಲೀಸರು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.


Spread the love
Subscribe
Notify of

0 Comments