Home Mangalorean News Kannada News ಅಥ್ಲೀಟ್ ಎಂ.ಆರ್. ಪೂವಮ್ಮರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ಷಿತ್ ಸುವರ್ಣರಿಂದ ಆತ್ಮೀಯ ಸ್ವಾಗತ; ರಾಜ್ಯ ಸರ್ಕಾರದಿಂದ...

ಅಥ್ಲೀಟ್ ಎಂ.ಆರ್. ಪೂವಮ್ಮರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ಷಿತ್ ಸುವರ್ಣರಿಂದ ಆತ್ಮೀಯ ಸ್ವಾಗತ; ರಾಜ್ಯ ಸರ್ಕಾರದಿಂದ ಸೂಕ್ತ ಗೌರವಧನ ನೀಡಲು ಆಗ್ರಹ

Spread the love

ಅಥ್ಲೀಟ್ ಎಂ.ಆರ್. ಪೂವಮ್ಮರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ಷಿತ್ ಸುವರ್ಣರಿಂದ ಆತ್ಮೀಯ ಸ್ವಾಗತ; ರಾಜ್ಯ ಸರ್ಕಾರದಿಂದ ಸೂಕ್ತ ಗೌರವಧನ ನೀಡಲು ಆಗ್ರಹ

ಮಂಗಳೂರು: ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ಇಂದು ಸಂಜೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಜನತಾದಳ (ಜಾತ್ಯತೀತ) ಅಧ್ಯಕ್ಷ ಅಕ್ಷಿತ್ ಸುವರ್ಣ ಅವರು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಎಂ.ಆರ್. ಪೂವಮ್ಮ ಅವರಿಗೆ ಪುಷ್ಪಗುಚ್ಛ ನೀಡಿ ಗೌರವಿಸಲಾಯಿತು. ಅವರ ಕ್ರೀಡಾ ಸಾಧನೆ, ಪರಿಶ್ರಮ ಹಾಗೂ ಸಮರ್ಪಣಾ ಮನೋಭಾವವನ್ನು ಅಕ್ಷಿತ್ ಸುವರ್ಣ ಅವರು ಶ್ಲಾಘಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವರು ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ   ಹೆಚ್.ಡಿ. ಕುಮಾರಸ್ವಾಮಿ ಅವರು ಎಂ.ಆರ್. ಪೂವಮ್ಮ ಅವರ ಕ್ರೀಡಾ ಸಾಧನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ, ಅವರಿಗೆ ಶುಭ ಹಾರೈಸಿದ್ದಾರೆ ಎಂದು ಅಕ್ಷಿತ್ ಸುವರ್ಣ ಅವರು ತಿಳಿಸಿದರು.

ಎಂ.ಆರ್. ಪೂವಮ್ಮ ಅವರ ಕ್ರೀಡಾ ಸಾಧನೆಗೆ ರಾಜ್ಯ ಸರ್ಕಾರ ಸೂಕ್ತ ಗೌರವಧನ ನೀಡಬೇಕು ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸಿ ಸಾಧನೆ ಮಾಡಿರುವ ಎಂ.ಆರ್. ಪೂವಮ್ಮ ಅವರಂತಹ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸೂಕ್ತ ಗೌರವಧನ ಹಾಗೂ ಅಗತ್ಯ ಪ್ರೋತ್ಸಾಹ ನೀಡಬೇಕು. ಕ್ರೀಡಾಪಟುಗಳು ತಮ್ಮ ಜೀವನದ ಅಮೂಲ್ಯ ಸಮಯವನ್ನು ದೇಶದ ಕೀರ್ತಿಗಾಗಿ ಮೀಸಲಿಟ್ಟು ಕಠಿಣ ಪರಿಶ್ರಮ ಪಡುತ್ತಾರೆ. ಇಂತಹ ಸಾಧಕರನ್ನು ಗುರುತಿಸಿ ಗೌರವಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅಕ್ಷಿತ್ ಸುವರ್ಣ ಅವರು ಅಭಿಪ್ರಾಯಪಟ್ಟರು.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳಿಗೆ ಕೇವಲ ಪ್ರಶಂಸೆ ಮಾತ್ರವಲ್ಲದೆ, ಅವರ ಸಾಧನೆಗೆ ತಕ್ಕ ಆರ್ಥಿಕ ಗೌರವ, ಪ್ರೋತ್ಸಾಹ ಮತ್ತು ಅಗತ್ಯ ಸೌಲಭ್ಯಗಳನ್ನೂ ಒದಗಿಸಬೇಕು. ಇದರಿಂದ ಮುಂದಿನ ಪೀಳಿಗೆಯ ಯುವ ಕ್ರೀಡಾಪಟುಗಳಿಗೆ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಹೆಚ್ಚಿನ ಪ್ರೇರಣೆ ದೊರೆಯಲಿದೆ ಎಂದು ಅವರು ಹೇಳಿದರು.
ರಾಜ್ಯ ಸರ್ಕಾರವು ಎಂ.ಆರ್. ಪೂವಮ್ಮ ಅವರ ಕ್ರೀಡಾ ಸಾಧನೆಯನ್ನು ಪರಿಗಣಿಸಿ, ಅವರಿಗೆ ಸೂಕ್ತ ಗೌರವಧನ ಘೋಷಿಸುವ ಮೂಲಕ ಕ್ರೀಡಾಪಟುಗಳಿಗೆ ಗೌರವ ನೀಡುವ ಮಾದರಿಯಾಗಬೇಕು. ಕ್ರೀಡಾಪಟುಗಳ ಸಾಧನೆಗೆ ಸರ್ಕಾರದ ಮಾನ್ಯತೆ ಮತ್ತು ಪ್ರೋತ್ಸಾಹ ದೊರೆಯುವುದು ಅತ್ಯಂತ ಅಗತ್ಯ ಎಂದು ಅಕ್ಷಿತ್ ಸುವರ್ಣ ಅವರು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು,ಯುವ ಪಧಾದಿಕಾರಿಗಳಾದ ಆದರ್ಶ ಪೂಜಾರಿ,ನಿಶಾಂತ್,ಸುಶಾಂತ್ ,ವಿನಿತ್ ಮುಂತಾದವರು ಪಾಲ್ಗೊಂಡಿದ್ದರು

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version