ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಪೊಲೀಸ್ ಇನ್ಸ್‌ಪೆಕ್ಟರ್

Spread the love

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಜಪೆ ಪೊಲೀಸ್ ಇನ್ಸ್‌ಪೆಕ್ಟರ್

ಮಂಗಳೂರು: ಚೀಟಿಂಗ್ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ಬಜಪೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಹಣ ಬಿಡುಗಡೆ ಮಾಡಲು ₹25,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದ್ದು, ಅದರ ಮೊದಲ ಕಂತಾಗಿ ₹5,000 ಲಂಚದ ಹಣ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲಂಚದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್ ಬಾಲಕೃಷ್ಣ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮುಂದಿನ ತನಿಖೆ ನಡೆಸುತ್ತಿದ್ದಾರೆ.


Spread the love
Subscribe
Notify of

0 Comments