Home Mangalorean News Kannada News ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ

Spread the love

ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ

ಉಡುಪಿ: ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಭಜರಂಗದಳ ಮುಖಂಡ ಪುನೀತ್ ಅತ್ತಾವರ್ ಅವರಿಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಕಲಂ 163ರ ಅಡಿಯಲ್ಲಿ ಈ ನಿರ್ಬಂಧ ಆದೇಶ ಜಾರಿಗೊಳಿಸಲಾಗಿದ್ದು, ಆಗಸ್ಟ್ 14, 2026ರಿಂದ ನವೆಂಬರ್ 13, 2026ರವರೆಗೆ ಮೂರು ತಿಂಗಳ ಕಾಲ ಉಡುಪಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಪುನೀತ್ ಅತ್ತಾವರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ವಿಧಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಉಡುಪಿ ಪೊಲೀಸರು ಪುನೀತ್ ಅತ್ತಾವರ್ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.


Spread the love

Exit mobile version