ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶೋತ್ಸವ: ಮನೆ ಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಬಿಡುಗಡೆ
ಉಡುಪಿ: ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.16ರಿಂದ 20ರವರೆಗೆ ಬ್ರಹ್ಮಕಲಶೋತ್ಸವ ವೈಭವ 2026 ಅದ್ಧೂರಿ ಯಾಗಿ ನಡೆಯಲಿದ್ದು, ದೇವತಾ ಕಾರ್ಯ ದ ಪೂರ್ವಭಾವಿಯಾಗಿ ಮನೆಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಹಾಗೂ ಪ್ರಚಾರದ ಸ್ಟಿಕ್ಕನ್ನು ಸೋಮವಾರ ಬಿಡುಗಡೆಗೊಳಿಸಲಾಯಿತು.

ಬ್ರಹ್ಮಕಲಶೋತ್ಸವದ ಪೂರ್ವಭಾವಿ ಯಾಗಿ 200ಕ್ಕೂ ಅಧಿಕ ವಾಹನಗಳಲ್ಲಿ ಅದ್ಧೂರಿಯ ಹೊರೆಕಾಣಿಕೆ ಸಮರ್ಪಣೆ ಯಾಗಲಿದೆ. ಬ್ರಹ್ಮಕಲಶೋತ್ಸವದಂದು 20 ಸಾವಿರಕ್ಕೂ ಅಧಿಕ ಮಂದಿಗೆ ಅನ್ನ ಸಂತರ್ಪಣೆ ನಡೆಯುತ್ತದೆ ಎಂದರು.
ಬನ್ನಂಜೆ ಶಾಸಕ ಯಶಪಾಲ್ ಎ. ಸುವರ್ಣ ಮಾತನಾಡಿ, ಶ್ರೀಮಹಾಲಿಂಗೇಶ್ವರ ದೇವಳ ಮಾಗಣೆಗೆ ಸಂಬಂಧಿಸಿದ್ದು, ಪ್ರಾಚೀನ, ಪುರಾಣ ಪ್ರಸಿದ್ಧವಾ ಗಿರುವ ದೇವಸ್ಥಾನವಾಗಿದೆ ಎಂದರು.
ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಕೆ. ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ, ಸಂಸ್ಕಾರ, ಸಂಸ್ಕೃತಿಯ ಪ್ರತೀಕವಾಗಿರುವ ದೇಗುಲದಲ್ಲಿ ನಡೆಯುವ ದೇವತಾ ಕಾರ್ಯದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಪೂರ್ವಜನ್ಮದ ಪುಣ್ಯ ಫಲಕನ್ನರ್ಪಾಡಿ ದೇವಳದಿಂದ ಊರಿನ ಸಮಸ್ತರ ಸಹಕಾರದೊಂದಿಗೆ ಅದ್ದೂರಿಯ ಹೊರೆಕಾಣಿಕೆಯನ್ನು ಸಮರ್ಪಣೆ ಮಾಡಲಾಗುವುದೆಂದರು.
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವ ಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ರಮೇಶ್ ಕಾಂಚನ್, ಹೋಟೆಲ್ ಉದ್ಯಮಿ ಪ್ರಭಾಕರ್ ಪೂಜಾರಿ, ನಗರಸಭೆ ಮಾಜಿ ಸದಸ್ಯ ಟಿ.ಜಿ. ಹೆಗ್ಡೆ ಉಪಸ್ಥಿತರಿದ್ದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ ಸ್ವಾಗತಿಸಿದರು. ಕೃತಿ ಮೂಡುಬೆಟ್ಟು ನಿರೂಪಿಸಿ, ವಂದಿಸಿದರು.