ಬಂಟ್ವಾಳ: ತಲವಾರು ತೋರಿಸಿ ಉದ್ಯೋಗಿಗೆ ಬೆದರಿಕೆ: ಅಂಗಡಿಗಳಿಂದ ಸಂಗ್ರಹಿಸಿದ್ದ ₹8.52 ಲಕ್ಷ ಸುಲಿಗೆ

Spread the love

ಬಂಟ್ವಾಳ: ತಲವಾರು ತೋರಿಸಿ ಉದ್ಯೋಗಿಗೆ ಬೆದರಿಕೆ: ಅಂಗಡಿಗಳಿಂದ ಸಂಗ್ರಹಿಸಿದ್ದ ₹8.52 ಲಕ್ಷ ಸುಲಿಗೆ

ಬಂಟ್ವಾಳ: ಅಂಗಡಿಗಳಿಂದ ಹಣ ಸಂಗ್ರಹಿಸಿ ಬೈಕ್ನಲ್ಲಿ ತೆರಳುತ್ತಿದ್ದ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟ ಸಂಸ್ಥೆಯ ಉದ್ಯೋಗಿಗೆ ತಲವಾರು ತೋರಿಸಿ ಬೆದರಿಸಿ ₹8.52 ಲಕ್ಷ ನಗದು ಸುಲಿಗೆ ಮಾಡಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಮುಲ್ಕಾಜೆ ಮಾಡದಲ್ಲಿ ನಡೆದಿದೆ.

ಮಂಗಳೂರಿನ ಕಣ್ಣೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಅವರು ವಿವಿಧ ಅಂಗಡಿಗಳಿಂದ ಹಣ ಸಂಗ್ರಹಿಸಿ ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಬೈಕ್ನಲ್ಲಿ ತೆರಳುತ್ತಿದ್ದರು.

ಮಧ್ಯಾಹ್ನ ಸುಮಾರು 1 ಗಂಟೆಗೆ ಮುಲ್ಕಾಜೆ ಮಾಡ ಬಳಿ ತಲುಪಿದಾಗ, ಎರಡು ಬೈಕ್ಗಳಲ್ಲಿ ಬಂದ ನಾಲ್ವರು ಅಪರಿಚಿತರು ಮಯ್ಯದಿ ಅವರನ್ನು ತಲವಾರು ತೋರಿಸಿ ಬೆದರಿಸಿದ್ದಾರೆ. ಬಳಿಕ ಅವರ ಬಳಿಯಿದ್ದ ₹8,52,000 ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ.

ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love
Subscribe
Notify of

0 Comments