ಬಂಟ್ವಾಳ: ನಿಷೇಧಿತ ಎಂ.ಡಿ.ಎಂ.ಎ ಸಾಗಾಟ – ಇಬ್ಬರು ಬಂಧನ, ₹42.30 ಲಕ್ಷ ಮೌಲ್ಯದ ಮಾದಕ ವಸ್ತು ಪತ್ತೆ

Spread the love

ಬಂಟ್ವಾಳ: ನಿಷೇಧಿತ ಎಂ.ಡಿ.ಎಂ.ಎ ಸಾಗಾಟ – ಇಬ್ಬರು ಬಂಧನ, ₹42.30 ಲಕ್ಷ ಮೌಲ್ಯದ ಮಾದಕ ವಸ್ತು ಪತ್ತೆ

ಬಂಟ್ವಾಳ: ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದು, ಸುಮಾರು ₹42,30,000 ಮೌಲ್ಯದ 423 ಗ್ರಾಂ ಎಂ.ಡಿ.ಎಂ.ಎ ವಶಪಡಿಸಿಕೊಂಡಿದ್ದಾರೆ.

ದಿನಾಂಕ 02.05.2026 ರಂದು ಸಂಜೆ, ಪೊಲೀಸ್ ಉಪ ನಿರೀಕ್ಷಕರಾದ ಮಂಜುನಾಥ ಟಿ (ಕಾ&ಸು) ಅವರಿಗೆ ಎಂ.ಡಿ.ಎಂ.ಎ ಸಾಗಾಟದ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ, ಸಿಬ್ಬಂದಿಗಳೊಂದಿಗೆ ಮಂಚಿ ಗ್ರಾಮದ ಪಂಜಾಲ ಕ್ರಾಸ್ ಬಳಿ ತಪಾಸಣೆ ನಡೆಸಿದರು. ಈ ವೇಳೆ KA-20-Z-9585 ಸಂಖ್ಯೆಯ ಬೊಲೆರೋ ವಾಹನವನ್ನು ತಡೆದು ಪರಿಶೀಲಿಸಿದಾಗ, ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರನ್ನು ವಿಚಾರಣೆಗೊಳಪಡಿಸಲಾಯಿತು.

ಅವರು ಬಂಟ್ವಾಳ ಬೊಳಂತೂರು ನಿವಾಸಿಗಳಾದ ಮೊಹಮ್ಮದ್ ನಿಜಾಮುದ್ದೀನ್ (30) ಹಾಗೂ ಮೊಹಮ್ಮದ್ ಶಾಹೀಂ (19) ಎಂದು ಗುರುತಿಸಲಾಯಿತು. ವಿಚಾರಣೆ ವೇಳೆ ಆರೋಪಿಗಳು ಬೆಂಗಳೂರಿನಲ್ಲಿ ಅಪರಿಚಿತ ನೈಜೀರಿಯಾ ಮೂಲದ ವ್ಯಕ್ತಿಯಿಂದ ಎಂ.ಡಿ.ಎಂ.ಎ ಖರೀದಿಸಿ ಮಾರಾಟಕ್ಕಾಗಿ ಸಾಗಿಸುತ್ತಿದ್ದುದಾಗಿ ಒಪ್ಪಿಕೊಂಡಿದ್ದಾರೆ.

ತಪಾಸಣೆ ವೇಳೆ 423 ಗ್ರಾಂ ಎಂ.ಡಿ.ಎಂ.ಎ, 03 ಮೊಬೈಲ್ ಫೋನ್‌ಗಳು ಹಾಗೂ ಕೃತ್ಯಕ್ಕೆ ಬಳಸಿದ ಬೊಲೆರೋ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹46,25,000 ಎಂದು ಅಂದಾಜಿಸಲಾಗಿದೆ.

ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 68/2026, ಕಲಂ 8(C) r/w 20(b)(ii)(C) ಅಡಿಯಲ್ಲಿ NDPS ಕಾಯ್ದೆ 1985 ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments