ಬೆಳ್ತಂಗಡಿ |ಭೀಕರ ಸರಣಿ ಅಪಘಾತ; ಇಬ್ಬರು ದ್ವಿಚಕ್ರ ವಾಹನ ಸವಾರರ ದುರ್ಮರಣ!

Spread the love

ಬೆಳ್ತಂಗಡಿ |ಭೀಕರ ಸರಣಿ ಅಪಘಾತ; ಇಬ್ಬರು ದ್ವಿಚಕ್ರ ವಾಹನ ಸವಾರರ ದುರ್ಮರಣ!

ಬೆಳ್ತಂಗಡಿ : ಗೂಡ್ಸ್ ಟೆಂಪೋ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಬುಧವಾರ ನಡೆದಿದೆ.

ಮೃತರನ್ನು ನಾವೂರು ನಿವಾಸಿ ಸಂತೋಷ್ (32) ಮತ್ತು ಕಣಿಯೂರು ಗ್ರಾಮದ ಪಿಲಿಗೂಡು ನಿವಾಸಿ ಮೋಹನ್(33) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಹೋಗುತ್ತಿದ್ದ ಟಾಟಾ ಗೂಡ್ಸ್ ವಾಹನವು, ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಎರಡು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಅಪಘಾತದಲ್ಲಿ ಸ್ಕೂಟರ್ ಸವಾರ ಸಂತೋಷ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೋಹನ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments