Home Mangalorean News Kannada News ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

Spread the love

ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ. ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ ಧರ್ಮಸ್ಥಳ ಪ್ರಕರಣದ ಸಾಕ್ಷಿ ಚಿನ್ನಯ್ಯ ಹೈಕೋರ್ಟ್ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಇಂದು ಮಧ್ಯಾಹ್ನ ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪೊಲೀಸ್ ಇಲಾಖೆಯ ಕಾರು ಪಲ್ಟಿಯಾಗಿದೆ.

ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯ ವಾಗಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.


Spread the love

Exit mobile version