ಬೆಳ್ತಂಗಡಿ: ಪಿಗ್ಮಿ ಸಂಗ್ರಹಕಾರನಾಗಿದ್ದ ಯುವಕ ಆತ್ಮಹತ್ಯೆ

Spread the love

ಬೆಳ್ತಂಗಡಿ: ಪಿಗ್ಮಿ ಸಂಗ್ರಹಕಾರನಾಗಿದ್ದ ಯುವಕ ಆತ್ಮಹತ್ಯೆ

ಬೆಳ್ತಂಗಡಿ: ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲವಂತಿಗೆ ಗ್ರಾಮದ ಬಾಳೆಹಿತ್ತಿಲು ಎಂಬಲ್ಲಿ ಬುಧವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಬಾಳೆಹಿತ್ತಿಲು ನಿವಾಸಿ ಪುನೀತ್ ಅಲಿಯಾಸ್ ಪುರುಷೋತ್ತಮ್ ಗೌಡ ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಬೆಳ್ತಂಗಡಿ ಶಾಖೆಯಲ್ಲಿ ಪಿಗ್ಮಿ ಸಂಗ್ರಹಕಾರರಾಗಿ ಕೆಲಸ ಮಾಡುತ್ತಿದ್ದರು.

ಕೆಲಸಕ್ಕೆ ರಜೆ ಹಾಕಿ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ತಮ್ಮ ಸಂಬಂಧಿಕರು ಮತ್ತು ಸಹೋದರರೊಂದಿಗೆ ಉತ್ಸಾಹದಿಂದ ಇದ್ದ ಪುನೀತ್, ಬುಧವಾರ ರಾತ್ರಿ 9:30ರ ಸುಮಾರಿಗೆ ತಮ್ಮ ಮನೆಯ ಸಮೀಪದ ತೋಟದಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆನ್ನಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ,


Spread the love
Subscribe
Notify of

0 Comments