ಸರ್ವ ಧರ್ಮಿಯರ ಉಪಸ್ಥಿತಿಯಲ್ಲಿ ಈಶ್ವರ್ ಮಲ್ಪೆ ಸ್ವಗೃಹ ನಿರ್ಮಾಣಕ್ಕೆ ಭೂಮಿ ಪೂಜೆ
ಮಲ್ಪೆ: ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ಸ್ವಗೃಹ ನಿರ್ಮಾಣದ ಭೂಮಿ ಪೂಜಾ ಕಾರ್ಯಕ್ರಮ ಸೋಮವಾರ ಅತ್ಯಂತ ಭಕ್ತಿಭಾವದಿಂದ ಹಾಗೂ ಸಡಗರದಿಂದ ನೆರವೇರಿತು.

ಈ ಪುಣ್ಯ ಸಂದರ್ಭದಲ್ಲಿ ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ,ತೊಟ್ಟಂ ಸಂತ ಅನ್ನಮ್ಮ ಚರ್ಚಿನ ಧರ್ಮಗುರು ವಂ|ಡೆನಿಸ್ ಡೆಸಾ, ಮುಸ್ಲಿಂ ಧರ್ಮಗುರುಗಳು, ಉದ್ಯಮಿ ಡಾ. ಗೋವಿಂದ ಬಾಬು ಪೂಜಾರಿ, ಡಾ. ಗಣನಾಥ್ ಎಕ್ಕಾರ್ ಹಾಗೂ ಸಮನ್ವಯ ಸರ್ವಧರ್ಮ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ವಿಶೇಷ ಗೌರವ ತಂದರು.
ಈ ಸಂದರ್ಭದಲ್ಲಿ ವಿವಿಧ ಧರ್ಮಗಳ ಗಣ್ಯರು ಒಂದೇ ವೇದಿಕೆಯಲ್ಲಿ ಸೇರಿ ಏಕತೆ, ಸಹಕಾರ ಮತ್ತು ಸೌಹಾರ್ದತೆಯ ಸಂದೇಶವನ್ನು ಹರಡಿದರು. ಭಕ್ತಿ, ಪರಂಪರೆ ಮತ್ತು ಸಮಾನತೆಯ ಸಂಕೇತವಾಗಿ ನಡೆದ ಈ ಕಾರ್ಯಕ್ರಮವು ಎಲ್ಲರ ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿತು. ಭವಿಷ್ಯದಲ್ಲಿ ನಿರ್ಮಾಣವಾಗಲಿರುವ ಈ ಗೃಹವು ಸಂತೋಷ, ಸಮೃದ್ಧಿ ಮತ್ತು ಶಾಂತಿಯ ನಿಲಯವಾಗಲಿ ಎಂದು ಉಪಸ್ಥಿತರಿದ್ದ ಎಲ್ಲಾ ಗಣ್ಯರು ಶುಭ ಹಾರೈಸಿದರು
ಈಶ್ವರ್ ಮಲ್ಪೆ ತಂಡದ ಸದಸ್ಯರು ಹಾಗೂ ಅಭಿಮಾನಿ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಕೈಜೋಡಿಸಿದರು.












