ಬಿಜೆಪಿ ನಾಯಕರುಗಳೇ ಶಿಕ್ಷಣದ ಜೊತೆ ಧರ್ಮ ಬೆರೆಸುವುದನ್ನು ನಿಲ್ಲಿಸಿ : ಕೆ. ವಿಕಾಸ್ ಹೆಗ್ಡೆ

Spread the love

ಬಿಜೆಪಿ ನಾಯಕರುಗಳೇ ಶಿಕ್ಷಣದ ಜೊತೆ ಧರ್ಮ ಬೆರೆಸುವುದನ್ನು ನಿಲ್ಲಿಸಿ : ಕೆ. ವಿಕಾಸ್ ಹೆಗ್ಡೆ

ಕುಂದಾಪುರ: ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನಲ್ಲಿನ ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಜೆ ನೀಡುವ ಬದಲು ಪರೀಕ್ಷೆ ನಡೆಸುತ್ತಿದ್ದಾರೆ ಎನ್ನುವ ವಿದ್ಯಾರ್ಥಿಗಳ ಆರೋಪ ಹಾಗೂ ಧರಣಿಯಲ್ಲಿ ದಕ್ಷಿಣ ಕನ್ನಡ ಬಿಜೆಪಿ ನಾಯಕರುಗಳು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಆಡುವುದನ್ನು ನಿಲ್ಲಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಕೆ. ವಿಕಾಸ್ ಹೆಗ್ಡೆ ಪತ್ರಿಕಾ ಹೇಳಿಕೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಧರ್ಮದ ಜೊತೆ ರಾಜಕೀಯ ಬೆರೆಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ನಾಯಕರುಗಳು ಈಗ ಧರ್ಮದ ಜೊತೆ ಶಿಕ್ಷಣವನ್ನು ಬೆರೆಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ. ಇವತ್ತು ಪ್ರಪಂಚದಾದ್ಯಂತ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ವಿದ್ಯಾವಂತರ ಜಿಲ್ಲೆಯೆಂದು ಕರೆಯಲು ಅತೀ ಮುಖ್ಯ ಕಾರಣ ಕ್ರೈಸ್ತ ಶಿಕ್ಷಣ ಸಂಸ್ಥೆಗಳು. ಅವರು ಸ್ವಾತಂತ್ರ್ಯ ಪೂರ್ವ ಹಾಗೂ ಸ್ವಾತಂತ್ರ್ಯ ನಂತರ ಜಾತಿ, ಧರ್ಮ, ಮತ, ಬಡವ, ಶ್ರೀಮಂತ ಎನ್ನುವ ತಾರತಮ್ಯ ಮಾಡದೆ ಎಲ್ಲರಿಗೂ ಶಿಕ್ಷಣ ನೀಡಿದವರು ಕ್ರೈಸ್ತ ಧರ್ಮಿಯರು. ಇವತ್ತು ವಿದ್ಯಾರ್ಥಿಗಳ ಸಮಸ್ಯೆಯನ್ನು ಶಿಕ್ಷಣ ಸಂಸ್ಥೆಯವರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಹೆತ್ತವರು ಬಗೆಹರಿಸಿಕೊಳ್ಳುತ್ತಾರೆ. ಆದರೆ ಬಿಜೆಪಿ ನಾಯಕರುಗಳಿಗೆ ವಿದ್ಯಾರ್ಥಿಗಳ ಬಗ್ಗೆ ಅಷ್ಟೊಂದು ಆಸಕ್ತಿ ಇದ್ದರೆ ಅವರ ಭವಿಷ್ಯಕ್ಕೆ ಬೇಕಾದ ಅಗತ್ಯಗಳನ್ನು ಪೂರೈಸುವ ಕೆಲಸ ಮಾಡಲಿ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love
Subscribe
Notify of

0 Comments