Home Mangalorean News Kannada News ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ

Spread the love

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ

ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ ಆರಂಭಿಸಬೇಕು ಹಾಗೂ ಕಚೇರಿ ಸಮಯದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಹಾಜರಿದ್ದು ಸಾರ್ವಜನಿಕರಿಗೆ ತ್ವರಿತವಾಗಿ ಸೇವೆ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಉಡುಪಿ ನಗರ ಬಿಜೆಪಿ ಹಾಗೂ ನಗರಸಭೆಯ ನಿಕಟಪೂರ್ವ ಸದಸ್ಯರ ನಿಯೋಗವು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರಿಗೆ ಮನವಿ ಸಲ್ಲಿಸಿದೆ.

ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್ ಹಾಗೂ ನಗರಸಭೆಯ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ನಿಯೋಗವು, ನಗರಸಭೆಯಲ್ಲಿ ಜನಪ್ರತಿನಿಧಿಗಳ ಆಡಳಿತ ಇಲ್ಲದಿರುವುದರಿಂದ ಸಾರ್ವಜನಿಕ ಸೇವೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ ಎಂದು ಗಮನ ಸೆಳೆಯಿತು. ನಗರಸಭೆಯ ಕಚೇರಿ ಸಮಯದಲ್ಲಿಯೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಸೇವೆಗೆ ಲಭ್ಯವಿರುವುದಿಲ್ಲ ಎಂಬ ದೂರುಗಳಿದ್ದು, ಹಿಂದಿನ ನಗರಸಭೆ ಆಡಳಿತದ ಅವಧಿಯಲ್ಲಿ ಅನುಮೋದನೆಗೊಂಡಿದ್ದ ಹಲವು ಕಾಮಗಾರಿಗಳು ಇನ್ನೂ ಆರಂಭವಾಗಿಲ್ಲ. ಬಾಕಿ ಇರುವ ಎಲ್ಲ ಕಾಮಗಾರಿಗಳನ್ನು ತಕ್ಷಣ ಪ್ರಾರಂಭಿಸಿ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು, ಎಸ್‌ಐಆರ್ ಪ್ರಕ್ರಿಯೆಗಾಗಿ ವಿವಿಧ ಸರ್ಕಾರಿ ಇಲಾಖೆಗಳ ಸಿಬ್ಬಂದಿಯನ್ನು ನಿಯೋಜಿಸಲಾಗಿರುವುದರಿಂದ ಇಲಾಖೆಗಳ ದೈನಂದಿನ ಕಾರ್ಯಚಟುವಟಿಕೆಗಳಿಗೆ ತೊಂದರೆಯಾಗಿದೆ ಎಂದು ತಿಳಿಸಿದರು. ಇನ್ನು ಹತ್ತು ದಿನಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಎಲ್ಲ ಸಿಬ್ಬಂದಿ ತಮ್ಮ ತಮ್ಮ ಇಲಾಖೆಗಳ ಕರ್ತವ್ಯಗಳಿಗೆ ಮರಳಲಿದ್ದಾರೆ ಎಂದು ಹೇಳಿದರು. ನಗರಸಭೆಯ ವಿವಿಧ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ಕಂಡುಕೊಳ್ಳಲು ನಿಕಟಪೂರ್ವ ನಗರಸಭಾ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಶೀಘ್ರದಲ್ಲೇ ಪ್ರತ್ಯೇಕ ಸಭೆ ನಡೆಸುವುದಾಗಿಯೂ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ನಗರದಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಹಾವಳಿಯ ಬಗ್ಗೆಯೂ ಜಿಲ್ಲಾಧಿಕಾರಿಗಳು ಕಳವಳ ವ್ಯಕ್ತಪಡಿಸಿದರು. ಬೀದಿನಾಯಿಗಳ ಕಾಟಕ್ಕೆ ಸಂಬಂಧಿಸಿದಂತೆ ಪ್ರತಿದಿನ ಹಲವಾರು ದೂರುಗಳು ಬರುತ್ತಿದ್ದು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಪ್ರಾಣಿದಯಾ ಸಂಘಟನೆಗಳಿಂದ ನಿರೀಕ್ಷಿತ ಸಹಕಾರ ದೊರೆಯುತ್ತಿಲ್ಲ ಎಂದು ತಿಳಿಸಿದರು.

ಬೀದಿನಾಯಿಗಳನ್ನು ಹಿಡಿದು ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ನಡೆಸುವ ಕಾರ್ಯಕ್ರಮಕ್ಕೆ ಸಾಕಷ್ಟು ಅನುದಾನ ಲಭ್ಯವಿದ್ದರೂ, ನಾಯಿಗಳನ್ನು ಹಿಡಿಯಲು ಅಗತ್ಯ ಸಿಬ್ಬಂದಿ ದೊರೆಯುತ್ತಿಲ್ಲ. ಈ ಕಾರ್ಯಕ್ಕೆ ಸಿಬ್ಬಂದಿಗೆ ತರಬೇತಿ ನೀಡಲು ಜಿಲ್ಲಾಡಳಿತ ಸಿದ್ಧವಿದ್ದರೂ ಮಾನವ ಸಂಪನ್ಮೂಲದ ಕೊರತೆ ಎದುರಾಗಿದೆ. ಜಿಲ್ಲೆಯಲ್ಲಿರುವ ಪ್ರಾಣಿದಯಾ ಸಂಘಟನೆಗಳು ಸಲಹೆ ನೀಡುವುದಕ್ಕೆ ಸೀಮಿತವಾಗಿದ್ದು, ಕಾರ್ಯಾಚರಣೆಗೆ ಅಗತ್ಯ ಸಹಕಾರ ನೀಡಲು ಮುಂದೆ ಬರುತ್ತಿಲ್ಲ. ಅಲ್ಲದೆ, ಈ ಕಾರ್ಯಕ್ಕೆ ಸಂಬಂಧಿಸಿದ ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಜಿಲ್ಲೆಯ ಯಾವುದೇ ಪ್ರಾಣಿದಯಾ ಸಂಘಟನೆ ನೋಂದಾಯಿತವಾಗಿಲ್ಲದಿರುವುದು ಸಮಸ್ಯೆಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.

ನಗರಸಭೆಯ ಸಮಸ್ಯೆಗಳು ಹಾಗೂ ಬೀದಿನಾಯಿಗಳ ಹಾವಳಿ ಸೇರಿದಂತೆ ಸಾರ್ವಜನಿಕರಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ಜಿಲ್ಲಾಡಳಿತ ಕೈಗೊಳ್ಳುವ ಜನಪರ ಕಾರ್ಯಗಳಿಗೆ ಉಡುಪಿ ನಗರ ಬಿಜೆಪಿ, ನಿಕಟಪೂರ್ವ ನಗರಸಭಾ ಸದಸ್ಯರು ಹಾಗೂ ಶಾಸಕರು ಸಂಪೂರ್ಣ ಸಹಕಾರ ನೀಡಲಿದ್ದಾರೆ ಎಂದು ನಿಯೋಗವು ಭರವಸೆ ನೀಡಿತು.

ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿಯ ಪ್ರಮುಖರು ಹಾಗೂ ನಗರಸಭೆಯ ನಿಕಟಪೂರ್ವ ಸದಸ್ಯರು ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version