ಯುವ ಭಾರತ ನಿರ್ಮಾಣಕ್ಕೆ ಮುನ್ನಡಿ ಬರೆದ ಬಜೆಟ್ : ಯಶ್ಪಾಲ್ ಸುವರ್ಣ

Spread the love

ಯುವ ಭಾರತ ನಿರ್ಮಾಣಕ್ಕೆ ಮುನ್ನಡಿ ಬರೆದ ಬಜೆಟ್ : ಯಶ್ಪಾಲ್ ಸುವರ್ಣ

ಉಡುಪಿ: ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ತಮ್ಮ 9 ನೇ ಬಜೆಟ್ ಮಂಡಿಸಿದ್ದು, ದೇಶದ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಮೂಲಕ ವಿಕಸಿತ ಭಾರತಕ್ಕೆ ಪೂರಕವಾಗಿ ಯುವ ಭಾರತ ನಿರ್ಮಾಣಕ್ಕೆ ಈ ಬಜೆಟ್ ಮುನ್ನುಡಿ ಬರೆಯಲಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದ್ದಾರೆ

ದೇಶಾದ್ಯಂತ ಏಳು ಹೈಸ್ಪೀಡ್ ರೈಲು ಕಾರಿಡಾರ್ ಗಳ ಅಭಿವೃದ್ಧಿ, ರಕ್ಷಣಾ ವಲಯಕ್ಕೆ ವಿಶೇಷ ಆದ್ಯತೆ, ಯುವ ಜನತೆಗೆ ಉದ್ಯೋಗ ಸೃಷ್ಟಿಗಾಗಿ ಐಟಿ ಸಂಸ್ಥೆಗಳಿಗೆ ಪ್ರೋತ್ಸಾಹ, 16ನೇ ಹಣಕಾಸು ಆಯೋಗದ ಮೂಲಕ ರಾಜ್ಯಗಳಿಗೆ ಗರಿಷ್ಠ ಅನುದಾನ, ಮಹಿಳಾ ಉದ್ಯಮಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ “ಶಿ ಮಾರ್ಚ್” ಯೋಜನೆ, ಎಲ್ಲಾ ರಾಜ್ಯಗಳಿಗೆ ಯೂನಿವರ್ಸಿಟಿ ಟೌನ್ ಶಿಪ್ ಜೊತೆಗೆ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಆದ್ಯತೆ, ಕೃಷಿ, ಮೀನುಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಮಹತ್ವ ನೀಡುವ ಕಾರ್ಯಕ್ರಮಗಳನ್ನು ಬಜೆಟ್ ಒಳಗೊಂಡಿರುವುದು ದೇಶದ ಜನತೆಯಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ವಿಶ್ವದ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಭಾರತವನ್ನು ತೃತೀಯ ಸ್ಥಾನಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಹೇಳಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments