ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯಾಗಿ ಘೋಷಣೆ

Spread the love

ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ: ತುಳು ರಾಜ್ಯದ ಎರಡನೇ ಹೆಚ್ಚುವರಿ ಭಾಷೆಯಾಗಿ ಘೋಷಣೆ

ಮಂಗಳೂರು: ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತದಲ್ಲಿ ಕನ್ನಡ ಭಾಷೆಯ ಜೊತೆಗೆ ತುಳು ಭಾಷೆಯನ್ನು ಸರ್ಕಾರಿ ಉದ್ದೇಶಗಳಿಗಾಗಿ ಕರ್ನಾಟಕ ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ ಮಾಡಲು ಅನುಮೋದನೆ ನೀಡಿದೆ ಎಂದು  ಮುಖ್ಯಮಂತ್ರಿ ಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಅವರು ಶುಕ್ರವಾರ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತುಳು ಒಂದು ಭಾಷೆಯ ಸರ್ವತೋಮುಖ ಅಭಿವೃದ್ಧೀಗಾಗಿ ಕರ್ನಾಟಕದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ ಮಾಡಬೇಕೆಂಬ ಬೇಡಿಕೆಯ ಮೇರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ ಈ ಘೋಷಣೆ ಮಾಡಲಾಗಿದೆ ಎಂದರು.
ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಸೇಡಿಯಾಪು ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದ್ದು ಕಾಲೇಜು ಭೋಧನಾ ಆಸ್ಪತ್ರೆ, ಹಾಸ್ಟೆಲ್ ಮತ್ತಿತರ ಮೂಲಸೌಲಭ್ಯಗಳನ್ನು 579.79 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆ ನೀಡಿದೆ ಎಂದರು.

ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯ ನೀತಿ 2026ಕ್ಕೆ ಸಭೆ ಅನುಮೋದನೆ ನೀಡಿದ್ದು 500 ಕೋಟಿ ರೂ ವೆಚ್ಚದಲ್ಲಿ ಈ ನೀತಿಯ ಅನುಷ್ಠಾನ ಮಾಡಲಾಗುವುದು.


Spread the love
Subscribe
Notify of

0 Comments