Home Mangalorean News Kannada News ಅತ್ತೂರು ಚರ್ಚ್ ಬಳಿ ಕಾರು – ಬೈಕ್ ಅಪಘಾತ: ಸವಾರರಿಬ್ಬರಿಗೆ ಗಂಭೀರ ಗಾಯ

ಅತ್ತೂರು ಚರ್ಚ್ ಬಳಿ ಕಾರು – ಬೈಕ್ ಅಪಘಾತ: ಸವಾರರಿಬ್ಬರಿಗೆ ಗಂಭೀರ ಗಾಯ

Spread the love

ಅತ್ತೂರು ಚರ್ಚ್ ಬಳಿ ಕಾರು – ಬೈಕ್ ಅಪಘಾತ: ಸವಾರರಿಬ್ಬರಿಗೆ ಗಂಭೀರ ಗಾಯ

ಕಾರ್ಕಳ: ಬೆನ್ಜ್ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಅತ್ತೂರು ಚರ್ಚ್ ಬಳಿ ಗುರುವಾರ ಸಂಜೆ ನಡೆದಿದೆ.

ಗಾಯಗೊಂಡವರು ಬೈಕ್ ಸವಾರರಾದ ರುದ್ರೇಶ್ ಮತ್ತು ಹರೀಶ್ ಎಂದು ಗುರುತಿಸಲಾಗಿದ್ದು ಇಬ್ಬರು ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು

ಮಾಹಿತಿಗಳ ಪ್ರಕಾರ ದೂಪದಕಟ್ಟೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಬೆನ್ಜ್ ಕಾರಿಗೆ ದೂಪದಕಟ್ಟೆಯತ್ತ ಸಾಗುತ್ತಿದ್ದ ವಿದ್ಯಾರ್ಥಿಗಳ ಬೈಕ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಬೈಕ್ ರಸ್ತೆ ದಾಟಿ ಪೊದೆಗೆ ಉರುಳಿದೆ.

ಗಂಭೀರವಾಗಿ ಗಾಯಗೊಂಡ ಬೈಕ್ ಸವಾರರನ್ನು ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಕಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love

Exit mobile version