ಕಾರಿಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ: ಚಾಲಕ ಅಪಾಯದಿಂದ ಪಾರು
ಮಂಗಳೂರು: ಜನನಿಬಿಡ KSRTC ಬಸ್ ನಿಲ್ದಾಣದ ಸಮೀಪ ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಎಚ್ಚರಿಕೆ ವಹಿಸಿ ಕಾರಿನಿಂದ ಇಳಿದು ಸುರಕ್ಷಿತವಾಗಿ ಪಾರಾಗಿದ್ದಾರೆ.

ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ತ್ವರಿತವಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬೆಂಕಿ ಅವಘಡದಿಂದ ಕಾರು ಅರ್ಧ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.