ಬೆಳ್ತಂಗಡಿ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರು ಆರೋಪಿಗಳು ದಸ್ತಗಿರಿ

Spread the love

ಬೆಳ್ತಂಗಡಿ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಮೂವರು ಆರೋಪಿಗಳು ದಸ್ತಗಿರಿ

ಬೆಳ್ತಂಗಡಿ: ವೈದ್ಯರೊಬ್ಬರು ನಡೆಸುತ್ತಿದ್ದ ಕ್ಲಿನಿಕ್‌ಗೆ ಬೆಂಕಿ ಹಚ್ಚಿ ಔಷಧಗಳು ಹಾಗೂ ವೈದ್ಯಕೀಯ ಸಲಕರಣೆಗಳನ್ನು ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ನಡ ಗ್ರಾಮದ ಡಾ. ಪ್ರದೀಪ ಎ. (51) ಅವರು ಬೆಳ್ತಂಗಡಿ ತಾಲೂಕಿನ ನಾವೂರು ಎಂಬಲ್ಲಿ ನಡೆಸುತ್ತಿದ್ದ ಕ್ಲಿನಿಕ್‌ಗೆ ಅಕ್ಟೋಬರ್ 6, 2026ರಂದು ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಘಟನೆಯಿಂದ ಔಷಧಗಳು ಹಾಗೂ ವೈದ್ಯಕೀಯ ಸಲಕರಣೆಗಳು ಸೇರಿದಂತೆ ಅಂದಾಜು ₹2ರಿಂದ ₹3 ಲಕ್ಷ ಮೌಲ್ಯದ ಸೊತ್ತುಗಳು ಸುಟ್ಟುಹೋಗಿದ್ದವು.

ಈ ಘಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 112/2026ರಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಕಲಂ 326(f), 326(g) ಮತ್ತು 324(5)ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು, ನಾವೂರು ನಿವಾಸಿಗಳಾದ ರವಿ ಕುಮಾರ್ (31), ಸುರೇಶ್ ಪಿ.ಎನ್. (44) ಮತ್ತು ದಿನೇಶ್ ಪ್ರಭು (51) ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Subscribe
Notify of

0 Comments