ಜಾತಿ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ: ನಾಲ್ವರ ವಿರುದ್ಧ ಪ್ರಕರಣ ದಾಖಲು

Spread the love

ಜಾತಿ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ: ನಾಲ್ವರ ವಿರುದ್ಧ ಪ್ರಕರಣ ದಾಖಲು

ಕಡಬ: ಜಾತಿ ನಿಂದನೆ, ಹಲ್ಲೆ ಹಾಗೂ ಜೀವ ಬೆದರಿಕೆ ಆರೋಪದಡಿ ನಾಲ್ವರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಪ್ರಕರಣದ ಪಿರ್ಯಾದಿದಾರರಾದ ಕಡಬ ಕುಟ್ರುಪ್ಪಾಡಿ ನಿವಾಸಿ ಮೋನಮ್ಮ (55) ಅವರು ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿದವರಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದರು. ಏಪ್ರಿಲ್ 8, 2026ರಂದು ಅವರು ಕೆಲಸ ಮಾಡುತ್ತಿದ್ದ ಮನೆಯ ಬಳಿ ಜೆಸಿಬಿ ಮೂಲಕ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದರಿಂದ ರಸ್ತೆಗೆ ಹಾನಿಯಾಗುತ್ತಿರುವುದನ್ನು ಗಮನಿಸಿ, ಪಿರ್ಯಾದಿದಾರರು ಕೆಲಸ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ್ದಾರೆ.

ಈ ವೇಳೆ ಸ್ಥಳದಲ್ಲಿದ್ದ ಆರೋಪಿಗಳಾದ ರುಕ್ಮಯ್ಯ, ನೊಣಯ್ಯ, ಬಾಲಕೃಷ್ಣ ಹಾಗೂ ಹರಿಪ್ರಸಾದ್ ಅವರಿಗೆ ರಸ್ತೆ ಹಾನಿಯಾಗುತ್ತಿರುವುದರಿಂದ ಜಾಗದ ಮಾಲೀಕರ ಉಪಸ್ಥಿತಿಯಲ್ಲಿ ಕೆಲಸ ನಡೆಸುವಂತೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಆರೋಪಿಗಳು ಪಿರ್ಯಾದಿದಾರರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದರೆಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ 44/2026, ಕಲಂ 3(1)(s), 3(1)(r), 3(2)(va) (SC/ST ದೌರ್ಜನ್ಯ ತಡೆ ಕಾಯ್ದೆ ತಿದ್ದುಪಡಿ 2015) ಹಾಗೂ ಕಲಂ 118(1), 352, 351(2) BNS ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.


Spread the love
Subscribe
Notify of

0 Comments
Inline Feedbacks
View all comments