Home Mangalorean News Kannada News ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಮನವಿ

ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಮನವಿ

Spread the love

ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕುವಂತೆ ಜಿಲ್ಲಾಧಿಕಾರಿಗೆ ಕಥೊಲಿಕ್ ಸಭಾ ಉಡುಪಿ ಪ್ರದೇಶ ಮನವಿ

ಉಡುಪಿ: ಎಸ್ಐಆರ್ ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ ತಡೆಯುವುದು ಹಾಗೂ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಸ್ವರೂಪ ಟಿ ಕೆ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಬಳಸಲಾಗುವ ಫಾರಂ-7 ಅರ್ಜಿಗಳ ದುರುಪಯೋಗವಾಗುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಆತಂಕ ಹಾಗೂ ಸಂಶಯಗಳು ವ್ಯಕ್ತವಾಗುತ್ತಿವೆ. ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳಾದ ಕ್ರೈಸ್ತರು ಹಾಗೂ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಇಂತಹ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ ಎಂಬ ಅನುಮಾನಗಳೂ ವ್ಯಕ್ತವಾಗಿವೆ.

ಈ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ದುರುಪಯೋಗ ಅಥವಾ ಅನ್ಯಾಯಕ್ಕೆ ಅವಕಾಶವಾಗದಂತೆ ಜಿಲ್ಲಾಡಳಿತ ಹಾಗೂ ಚುನಾವಣಾ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಮನವಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರುಗಳನ್ನು ತಪ್ಪು ಮಾಹಿತಿ, ಸುಳ್ಳು ಆಕ್ಷೇಪಣೆ ಅಥವಾ ಅನ್ಯಾಯದ ಆಧಾರದ ಮೇಲೆ ಮತದಾರರ ಪಟ್ಟಿಯಿಂದ ಕೈಬಿಡದಂತೆ ವಿಶೇಷ ಎಚ್ಚರಿಕೆ ವಹಿಸಬೇಕು.

ಅರ್ಹ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದು ಅವರ ಪ್ರಜಾಪ್ರಭುತ್ವದ ಮೂಲಭೂತ ಹಕ್ಕಿನ ಮೇಲೆ ನೇರ ಪರಿಣಾಮ ಬೀರುವ ಗಂಭೀರ ವಿಷಯವಾಗಿದೆ. ಆದ್ದರಿಂದ ಎಸ್ಐಆರ್ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ, ನಿಷ್ಪಕ್ಷಪಾತತೆ ಹಾಗೂ ನಿಯಮಾನುಸಾರ ಕ್ರಮಗಳನ್ನು ಖಚಿತಪಡಿಸುವುದು ಅತ್ಯಂತ ಅಗತ್ಯವಾಗಿದೆ.

ಈ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಸ್ವೀಕರಿಸಲಾದ ಫಾರಂ-7 ಅರ್ಜಿಗಳ ಒಟ್ಟು ಸಂಖ್ಯೆ, ಅಂಗೀಕರಿಸಲಾದ ಅರ್ಜಿಗಳು ಹಾಗೂ ತಿರಸ್ಕರಿಸಲಾದ ಅರ್ಜಿಗಳ ಸಂಪೂರ್ಣ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವಂತೆ ವಿನಂತಿಸುತ್ತೇವೆ.

ಅಲ್ಲದೆ, ಯಾವುದೇ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಮೊದಲು ಸಂಬಂಧಪಟ್ಟ ಮತದಾರರಿಗೆ ಕಡ್ಡಾಯವಾಗಿ ನೋಟಿಸ್ ನೀಡಿ, ಆಕ್ಷೇಪಣೆ ಸಲ್ಲಿಸಲು ಹಾಗೂ ವಿಚಾರಣೆಯ ಸಂದರ್ಭದಲ್ಲಿ ತಮ್ಮ ವಾದವನ್ನು ಮಂಡಿಸಲು ಸಮರ್ಪಕ ಅವಕಾಶ ಕಲ್ಪಿಸಲಾಗಿದೆಯೇ ಎಂಬುದರ ಕುರಿತು ಸ್ಪಷ್ಟ ಮಾಹಿತಿ ನೀಡಬೇಕು.

ಫಾರಂ-7 ಅರ್ಜಿಗಳ ದುರುಪಯೋಗವಾಗದಂತೆ ಹಾಗೂ ಅರ್ಹ ಮತದಾರರ ಹೆಸರುಗಳು ತಪ್ಪಾಗಿ ಮತದಾರರ ಪಟ್ಟಿಯಿಂದ ಕೈಬೀಳದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ವಿಶೇಷವಾಗಿ ಅಲ್ಪಸಂಖ್ಯಾತರು, ದಲಿತರು ಹಾಗೂ ಇತರ ದುರ್ಬಲ ವರ್ಗಗಳಿಗೆ ಸೇರಿದ ಅರ್ಹ ಮತದಾರರ ಹೆಸರುಗಳನ್ನು ಯಾವುದೇ ಅನ್ಯಾಯದ ಆಧಾರದ ಮೇಲೆ ಕೈಬಿಡದಂತೆ ವಿಶೇಷ ಗಮನ ಹರಿಸಬೇಕು.

ಯಾವುದೇ ಸಮುದಾಯದ ಅರ್ಹ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಹಾಗೂ ಚುನಾವಣಾ ಪ್ರಕ್ರಿಯೆಯ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕಾಪಾಡುವುದು ಚುನಾವಣಾ ವ್ಯವಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ.

ಆದ್ದರಿಂದ, ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯನ್ನು ಖಚಿತಪಡಿಸಿ, ಫಾರಂ-7 ಅರ್ಜಿಗಳ ದುರುಪಯೋಗವನ್ನು ತಡೆಯಲು ಹಾಗೂ ಯಾವುದೇ ಅರ್ಹ ಮತದಾರರ ಹೆಸರು ಅನ್ಯಾಯವಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಎಸ್ ಐ ಆರ್ ಪ್ರಕ್ರಿಯೆಯನ್ನೇ ಸಂಪೂರ್ಣವಾಗಿ ರದ್ದುಗೊಳಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ನಿಯೋಗದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಮೆಲ್ವಿನ್ ಆರಾನ್ಹಾ ಶಿರ್ವ, ಕಾರ್ಯದರ್ಶಿ ಜುಲಿಯೆಟ್ ಡಿಸೋಜಾ, ಕೋಶಾಧಿಕಾರಿ ಉರ್ಬಾನ್ ಲೂವಿಸ್, ನಿಯೋಜಿತ ಅಧ್ಯಕ್ಷರಾದ ಲೂವಿಸ್ ಡಿಸೋಜಾ, ಉಡುಪಿ ವಲಯ ಅಧ್ಯಕ್ಷ ಕಿರಣ್ ಲೂವಿಸ್, ಮಾಜಿ ಅಧ್ಯಕ್ಷರಾದ ಅಲ್ಫೋನ್ಸ್ ಡಿಕೋಸ್ತಾ, ವಲೇರಿಯನ್ ಫೆರ್ನಾಂಡಿಸ್, ಮೇರಿ ಡಿಸೋಜಾ, ಸುಮದಾಯದ ಮುಖಂಡರಾದ ವೆರೋನಿಕಾ ಕರ್ನೆಲಿಯೋ, ರೋಶನಿ ಒಲಿವರ್ ಹಾಗೂ ಇತರರು ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version