ಉಡುಪಿ ಕಾಂಗ್ರೆಸ್ ಭವನದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ಮುಂದಾಳತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 157ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ ಜನ್ಮದಿನಾಚರಣೆಯನ್ನು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮೊದಲಿಗೆ ಜಯಶ್ರೀ ಶೇಟ್, ಸುದರ್ಶನ್ ಪಡುಕರೆ ಹಾಗೂ ತಾರಾನಾಥ್ ಸುವರ್ಣ ಅವರಿಂದ ಗಾಂಧಿ ಸ್ಮೃತಿ ಸಂಗೀತ ಕಾರ್ಯಕ್ರಮವು ನಡೆಯಿತು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್ ಹಾಗೂ ರಮೇಶ್ ಕಾಂಚನ್ ಅವರು ಜೊತೆಗೂಡಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೇಶಕ್ಕೆ ಅವರು ನೀಡಿರುವ ಕೊಡುಗೆಯನ್ನು ಸ್ಮರಿಸಿ ಅವರಿಗೆ ನಮನ ಸಲ್ಲಿಸಿದರು.

ನಿವೃತ್ತ ಅಧ್ಯಾಪಕರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿರುವ ದಯಾನಂದ್ ಕಿದಿಯೂರು ಅವರು ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕುರಿತು ಸ್ಪೂರ್ತಿದಾಯಕ ನುಡಿಗಳನ್ನು ಸಭೆಯಲ್ಲಿ ಹೇಳಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ ಏ ಗಫೂರ್, ಮಾಜಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಾಯಕರಾದ ದಿನೇಶ್ ಪುತ್ರನ್, ಮಹಾಬಲ ಕುಂದರ್, ನರಸಿಂಹಮೂರ್ತಿ, ಭುಜಂಗ ಶೆಟ್ಟಿ, ಕೇಶವ ಕೋಟ್ಯಾನ್, ಹರೀಶ್ ಶೆಟ್ಟಿ ಪಾಂಗಳ, ಕುಶಲ್ ಶೆಟ್ಟಿ, ಕೀರ್ತಿ ಶೆಟ್ಟಿ, ಅಮೃತ್ ಶೆಣೈ, ಶೇಖ್ ವಾಹಿದ್, ಸಜ್ಜನ್ ಶೆಟ್ಟಿ, ಯುವರಾಜ್ ಪುತ್ತೂರು, ಭಾಸ್ಕರ್ ರಾವ್ ಕಿದಿಯೂರು, ವಿಶ್ವಾಸ್ ಅಮೀನ್, ಪ್ರಖ್ಯಾತ್ ಶೆಟ್ಟಿ, ಪ್ರಶಾಂತ್ ಜತ್ತನ್ನ, ನಿರೀಕ್ಷ ಮೆಂಡನ್, ಶಶಿಧರ್ ಶೆಟ್ಟಿ, ಶರ್ಫುದ್ದೀನ್ ಶೇಖ್, ಜಯಕುಮಾರ್, ಮೀನಾಕ್ಷಿ ಮಾಧವ ಬನ್ನಂಜೆ, ಮಮತಾ ಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಅವರು ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್ ಅವರು ಧನ್ಯವಾದ ಸಲ್ಲಿಸಿದರು













