Home Mangalorean News Kannada News ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ : ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ : ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

Spread the love

ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ : ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ

ಮಂಗಳೂರು: ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮ(ನಿ) ಇವರ ವತಿಯಿಂದ ಕ್ರಿಶ್ಚಿಯನ್ ಸಮುದಾಯದ 2026-27 ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿ.ಇ.ಟಿ/ನೀಟ್( ಎಂ.ಬಿ.ಬಿ.ಎಸ್/ಬಿ.ಡಿ.ಎಸ್/ಆಯುಷ್/ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್/ ಬಿ.ಇ/ ಬಿ.ಟೆಕ್, ಫಾರ್ಮಸಿ, ಅಗ್ರಿಕಲ್ಚರ್ ಸೈನ್ಸ್, ವೆಟರ್ನರಿ ಆ್ಯಂಡ್ ಫಾರ್ಮ್ ಸೈನ್ಸ್ ಕೋರ್ಸ್) ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿಯಲ್ಲಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ನಿಗಮದ ವೆಬ್ಸೈಟ್ https://kccdclonline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ರೂ. 8 ಲಕ್ಷ ಮಿತಿಯಲ್ಲಿರಬೇಕು), ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್ ಜೆರಾಕ್ಸ್ ಪ್ರತಿ, ಸಿ.ಇ.ಟಿ/ನೀಟ್ ಪರೀಕ್ಷೆ ಪ್ರವೇಶ ಪತ್ರ, ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಅಂಕ ಪಟ್ಟಿಯ ದೃಢೀಕೃತ ಪ್ರತಿ, ಇಂಡಿಮ್ನಿಟಿ ಬಾಂಡ್, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ (2) ವನ್ನು ಸಲ್ಲಿಸಬೇಕು.

ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಇಂಡೆಮ್ನಿಟಿ ಬಾಂಡ್ ಹಾಗೂ ಇತರೆ ದಾಖಲಾತಿಗಳನ್ನು ಆನ್ಲೈನ್ ಸಲ್ಲಿಸಿದ ಕೂಡಲೇ ನಗರದ ಪಾಂಡೇಶ್ವರದ ಮೌಲಾನಾ ಅಜಾದ್ ಭವನದ 2 ನೇ ಮಹಡಿಯಲ್ಲಿರುವ ಕರ್ನಾಟಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version