ಅ. 12 ರಂದು ಮಂಗಳೂರು, ಉಚ್ಚಿಲ ದಸರಾ ಉದ್ಘಾಟನೆಗೆ ಸಿಎಂ ಡಿ ಕೆ ಶಿವಕುಮಾರ್

Spread the love

ಅ. 12 ರಂದು ಮಂಗಳೂರು, ಉಚ್ಚಿಲ ದಸರಾ ಉದ್ಘಾಟನೆಗೆ ಸಿಎಂ ಡಿ ಕೆ ಶಿವಕುಮಾರ್

ಉಡುಪಿ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಅಕ್ಟೋಬರ್ 12 ರಂದು ಸೋಮವಾರ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ

ಅಂದು ಮಧ್ಯಾಹ್ನ 1.30 ಗಂಟೆಗೆ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಆಗಮಿಸುವ ಶಿವಕುಮಾರ್ ಸಂಜೆ 3.40 ಕ್ಕೆ ಉಚ್ಚಿಲ ಮಹಾಲಕ್ಷೀ ದೇವಸ್ಥಾನದಲ್ಲಿ ಆಯೋಜಿಸಿರುವ ಮಹಿಳಾ ದಸರಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ.

ಬಳಿಕ ಮಂಗಳೂರಿಗೆ ತೆರಳಿರುವ ಅವರು ಸಂಜೆ 6 ಗಂಟೆಗೆ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ಮಂಗಳೂರು ದಸರಾ 2026 ಉದ್ಘಾಟಿಸಲಿದ್ದಾರೆ. ರಾತ್ರಿ 8.20ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ


Spread the love
Subscribe
Notify of

0 Comments