ಬಿ.ಸಿ.ರೋಡ್ ಫ್ಲೈಓವರ್‌ನಲ್ಲಿ ಬೈಕ್‌ಗಳ ನಡುವೆ ಡಿಕ್ಕಿ: 40 ಅಡಿ ಮೇಲಿನಿಂದ ಸರ್ವಿಸ್ ರಸ್ತೆಗೆ ಬಿದ್ದ ಸವಾರನಿಗೆ ಗಾಯ

Spread the love

ಬಿ.ಸಿ.ರೋಡ್ ಫ್ಲೈಓವರ್‌ನಲ್ಲಿ ಬೈಕ್‌ಗಳ ನಡುವೆ ಡಿಕ್ಕಿ: 40 ಅಡಿ ಮೇಲಿನಿಂದ ಸರ್ವಿಸ್ ರಸ್ತೆಗೆ ಬಿದ್ದ ಸವಾರನಿಗೆ ಗಾಯ

ಬಂಟ್ವಾಳ: ಎರಡು ಮೋಟಾರ್ ಸೈಕಲ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸುಮಾರು 40 ಅಡಿ ಎತ್ತರದ ಫ್ಲೈಓವರ್ ಮೇಲಿನಿಂದ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದು ಗಾಯಗೊಂಡ ಘಟನೆ ನ.10ರಂದು ಮಧ್ಯಾಹ್ನ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಬಿ.ಸಿ.ರೋಡ್‌ನಲ್ಲಿ ನಡೆದಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್‌ನಲ್ಲಿ ದಿಯಾ ಕೊಠಾರಿ ಎಂಬವರು KA-05-QX-1379 ನೋಂದಣಿಯ ಮೋಟಾರ್ ಸೈಕಲ್‌ನಲ್ಲಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ, ಅವ್ ನೀಲ್ ಸಾವಿಯೋ ಡಿಸೋಜ ಅವರು ಚಲಾಯಿಸುತ್ತಿದ್ದ KA-19-HW-5806 ನೋಂದಣಿಯ ಮೋಟಾರ್ ಸೈಕಲ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಅವ್ ನೀಲ್ ಸಾವಿಯೋ ಡಿಸೋಜ ಅವರು ಸುಮಾರು 40 ಅಡಿ ಎತ್ತರದ ಫ್ಲೈಓವರ್‌ನಿಂದ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ. ಪರಿಣಾಮವಾಗಿ ಅವರ ಎದೆ, ಎಡಭುಜ, ಹೊಟ್ಟೆ, ಬೆನ್ನು ಹಾಗೂ ಸೊಂಟಕ್ಕೆ ಗಾಯಗಳಾಗಿವೆ. ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಒಳರೋಗಿಯಾಗಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತಕ್ಕೆ ಕಾರಣವಾದ ಮೋಟಾರ್ ಸೈಕಲ್ ಸವಾರಿಣಿ ದಿಯಾ ಕೊಠಾರಿ ಅವರಿಗೆ ಯಾವುದೇ ಗಾಯಗಳಾಗಿಲ್ಲ.

ಈ ಸಂಬಂಧ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 136/2026ರಂತೆ ಭಾರತೀಯ ನ್ಯಾಯ ಸಂಹಿತೆಯ ಕಲಂ 281 ಮತ್ತು 125(a)ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


Spread the love
Subscribe
Notify of

0 Comments