ಕೊಲ್ಲೂರು ಬಳಿ ಇನ್ಸುಲೇಟರ್ ವಾಹನ -ಜೀಪು ನಡುವೆ ಢಿಕ್ಕಿ: ಇಬ್ಬರು ಮೃತ್ಯು, ಹಲವರಿಗೆ ಗಾಯ

Spread the love

ಕೊಲ್ಲೂರು ಬಳಿ ಇನ್ಸುಲೇಟರ್ ವಾಹನ -ಜೀಪು ನಡುವೆ ಢಿಕ್ಕಿ: ಇಬ್ಬರು ಮೃತ್ಯು, ಹಲವರಿಗೆ ಗಾಯ

ಕುಂದಾಪುರ: ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಮೀನು ಸಾಗಾಟದ ಇನ್ಸುಲೇಟರ್ ವಾಹನ ಮಧ್ಯೆ ಕೊಲ್ಲೂರು ದಳಿ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಹಲವು ಮಂದಿ ಗಾಯಗೊಂಡ ಬಗ್ಗೆ ವರದಿಯಾಗಿದೆ.

ಮೃತರನ್ನು ಜ್ಯೋತಿ ಮತ್ತು ಆರ್ಯ ಅನೂಪ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆರ್ಯ, ಆಯನ್, ಅವನಿ, ಅರ್ಜುನ್, ಮಿನಿ, ಅಭಯ್, ಅನೂಪ್, ಜ್ಯೋತಿಶ್, ಜೀಪ್ ಚಾಲಕ ದೇವರಾಜ್ ಎಂದು ಗುರುತಿಸಲಾಗಿದ್ದು ಕುಂದಾಪುರ ಮತ್ತು ಮಣಿಪಾಲ ಅಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಡಚಾದ್ರಿಯಿಂದ ಕೊಲ್ಲೂರಿನತ್ತ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಕೊಲ್ಲೂರು ಕಡೆಯಿಂದ ನಾಗೋಡಿ ಕಡೆಯತ್ತ ಸಾಗುತ್ತಿದ್ದ ಮೀನು ಸಾಗಾಟದ ಇನ್ಸುಲೇಟರ್ ವಾಹನ ಮಧ್ಯೆ ಈ ಅಪಘಾತ ನಡೆದಿದೆ. ಮೃತರು ಹಾಗೂ ಗಾಯಾಳುಗಳು ಕೇರಳ ಮೂಲದವರೆಂದು ತಿಳಿದುಬಂದಿದೆ.

ಕೊಲ್ಲೂರು ಠಾಣೆ ಪಿಎಸ್ಐಗಳಾದ ವಿನಯ್ ಎಂ.ಕೊರ್ಲಹಳ್ಳಿ, ಭೀಮಾಶಂಕರ್ ಸ್ಥಳಕ್ಕೆ ಹಾಗೂ ಗಾಯಾಳುಗಳಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.

ಘಟನೆಯ ಬಳಿಕ ಇನ್ಸುಲೇಟರ್ ವಾಹನ ಚಾಲಕ ಸ್ಥಳದಿಂದ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments