ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ದೂರು
ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಝಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ನಟ ಧನ್ವೀರ್ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಭೇಟಿ ಮಾಡಿ ಅಧಿಕೃತ ದೂರು ಸಲ್ಲಿಸಿದೆ.
NSUI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ಪೊಲೀಸ್ ಆಯುಕ್ತರನ್ನು ಭೇಟಿಯಾದ ನಿಯೋಗ, ನಟ ಧನ್ವೀರ್ ಅವರ ಹೇಳಿಕೆಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಮನವಿ ಮಾಡಿತು. ತನಿಖೆಯಲ್ಲಿ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು.
ಈ ಸಂದರ್ಭದಲ್ಲಿ NSUI ಉಪಾಧ್ಯಕ್ಷರಾದ ಸುಖ್ವಿಂದರ್ ಸಿಂಗ್, ಶಾನ್ ಸಿರಿ, ಕೀರ್ತನ್ ಕೊಡಪಾಲ ಹಾಗೂ ಮುಖಂಡರಾದ ಕೌಶಿಕ್, ಸುಶಾನ್ ಮತ್ತು ಏತಾನ್ ಉಪಸ್ಥಿತರಿದ್ದರು.













