ವಿಧಾನಪರಿಷತ್ತಿನ ಮುಖ್ಯ ಸಚೇತಕ ಮಂಜುನಾಥ ಭಂಡಾರಿಯವರಿಗೆ ಅಭಿನಂದನೆ

Spread the love

ವಿಧಾನಪರಿಷತ್ತಿನ ಮುಖ್ಯ ಸಚೇತಕ ಮಂಜುನಾಥ ಭಂಡಾರಿಯವರಿಗೆ ಅಭಿನಂದನೆ

ಉಡುಪಿ: ಕರ್ನಾಟಕ ವಿಧಾನಪರಿಷತ್ತಿನ ಸರ್ಕಾರಿ ಮುಖ್ಯ ಸಚೇತಕರಾಗಿ ಇತ್ತೀಚೆಗೆ ನೇಮಕಗೊಂಡ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಡಾ.ಮಂಜುನಾಥ ಭಂಡಾರಿಯವರು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಇಂದು ಭೇಟಿ ನೀಡಿದ ಹಿನ್ನೆಲೆಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ರವರ ನೇತೃತ್ವದಲ್ಲಿ ಅವರನ್ನು ಗೌರವಪೂರ್ವಕವಾಗಿ ಅಭಿನಂದಿಸಿ ಶುಭ ಹಾರೈಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ, ಜಿ.ಪ.ಮಾಜಿ ಸದಸ್ಯ ದಿವಾಕರ್ ಕುಂದರ್, ಹಿರಿಯ ಕಾಂಗ್ರೆಸ್ ನಾಯಕ ಮುರಳಿ ಶೆಟ್ಟಿ ಇಂದ್ರಾಳಿ, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳಾದ ಸತೀಶ್ ಮಂಚಿ, ಶಶಿರಾಜ್ ಕುಂದರ್, ಚಂದ್ರಮೋಹನ್, ಸತೀಶ್ ಕೊಡವೂರು, ನಾರಾಯಣ ಕುಂದರ್, ರಮೇಶ್ ಪಾಲ್ ಹಾಗೂ ಪ್ರಮುಖರಾದ ಗಣೇಶ್ ನೆರ್ಗಿ, ಮೀನಾಕ್ಷಿ ಮಾಧವ,ಸಂಧ್ಯಾ ತಿಲಕ್ ರಾಜ್, ಶೋಭಾ ಡಿ. ನಾಯ್ಕ್, ರಮಾ ದೇವಿ, ಸಂಜಯ್ ಆಚಾರ್ಯ ಚಂದ್ರಾವತಿ ಭಂಡಾರಿ ಉಪಸ್ಥಿತರಿದ್ದರು.


Spread the love
Subscribe
Notify of

0 Comments