ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ – ವಿಕಾಸ್ ಹೆಗ್ಡೆ

Spread the love

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆ – ವಿಕಾಸ್ ಹೆಗ್ಡೆ

ಕುಂದಾಪುರ:  ತಾಲೂಕಿನ ತೀರ್ಥಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52ರ ಕಿಲೋ ಮೀಟರ್ 79.00ರಲ್ಲಿ ಬಳ್ಕೂರು ಕಂಡ್ಲೂರು ಮಧ್ಯ ವರಾಹಿ ನದಿಗೆ ಅಡ್ಡಲಾಗಿ ಇರುವ ಸೇತುವೆಯ ಮರು ನಿರ್ಮಾಣಕ್ಕೆ ಸುಮಾರು 55 ಕೋಟಿ ಅನುದಾನವನ್ನು ಮಂಜೂರು ಮಾಡಿದ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ, ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಒಂದು ಕಡೆಯಲ್ಲಿ ವಿರೋಧ ಪಕ್ಷದ ಶಾಸಕರುಗಳು ಪಂಚ ಗ್ಯಾರಂಟಿಗಳ ಮೂಲಕ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಅಪಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ ಸಿದ್ದರಾಮಯ್ಯ ನೇತ್ರತ್ವದ ರಾಜ್ಯ ಸರ್ಕಾರ ರಸ್ತೆ, ಸೇತುವೆ ಮುಂತಾದ ಜನರ ಅಗತ್ಯ ಬೇಡಿಕೆಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ಬಿಡುಗಡೆ ಮಾಡುವುದರ ಮೂಲಕ ರಾಜ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ ಎನ್ನುವುದನ್ನು ರಾಜ್ಯದ ಜನತೆಗೆ ತಿಳಿಸುತ್ತಿದ್ದಾರೆ. ಬಹುವರ್ಷಗಳ ಬೇಡಿಕೆಯಾದ ಬಳ್ಕೂರು- ಕಂಡ್ಲೂರು ಮದ್ಯ ವಾರಾಹಿ ನದಿಗೆ ಅಡ್ಡಲಾಗಿ ಹೊಸ ಸೇತುವೆ ಆದಷ್ಟು ಬೇಗ ಉತ್ತಮ ಗುಣಮಟ್ಟದೊಂದಿಗೆ ನಿರ್ಮಾಣವಾಗಲಿ ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments