ಮನರೇಗಾ ಹೆಸರು ಬದಲು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Spread the love

ಮನರೇಗಾ ಹೆಸರು ಬದಲು: ಬೈಲೂರು ವಾರ್ಡಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ:  ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ-MGNREGA ಹೆಸರು ಮತ್ತು ಅದರಲ್ಲಿದ್ದ ಜನಪರ ಅಂಶಗಳನ್ನು ಬದಲಾಯಿಸಿ VB-G RAM G ಎಂಬ ಹೆಸರನ್ನು ಮರುನಾಮಕರಣ ಮಾಡಿದ್ದನ್ನು ವಿರೋಧಿಸಿ ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿದುಕೊಂಡ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಇಂದು 31ನೇ ಬೈಲೂರು ವಾರ್ಡಿನಲ್ಲಿ ಮಿಷನ್ ಆಸ್ಪತ್ರೆಯ ವೃತ್ತದ ಬಳಿ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು .

ಈ ಪ್ರತಿಭಟನೆಯಲ್ಲಿ ಮುಖ್ಯ ಭಾಷಣಕಾರರಾಗಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಶ್ರೀಮತಿ ಜ್ಯೋತಿ ಹೆಬ್ಬಾರ್ ಅವರು ಮಾತನಾಡುತ್ತಾ ಹಿಂದಿನ ಉದ್ಯೋಗ ಖಾತರಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಆಗ್ರಹಿಸಿ ಪ್ರಸ್ತುತ ಜನವಿರೋಧಿ ನೀತಿ VB-G RAM Gಯನ್ನು ಕೈಬಿಡಬೇಕೆಂದು ಆಕ್ರೋಶ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಮಾತನಾಡುತ್ತಾ ಕೇಂದ್ರ ಬಿಜೆಪಿ ಸರ್ಕಾರದ ಈ ರೀತಿಯ ಹುನ್ನಾರವನ್ನು ಜನಸಾಮಾನ್ಯರು ಸಹಿಸುವುದಿಲ್ಲ. ಕಾಂಗ್ರೆಸ್ ಪಕ್ಷವು ಬಡವರ ಪರವಿರುವ ಪಕ್ಷ. ಜನಸಾಮಾನ್ಯರಿಗೆ ನೆಮ್ಮದಿಯ ಬದುಕನ್ನು ಕಲ್ಪಿಸುವುದಕ್ಕಾಗಿ ಇಂತಹ ಜನಪರ ಯೋಜನೆಯನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಮಾಡುವುದೇ ಕಾರಣಕ್ಕೂ ಕೈಬಿಡಬಾರದು ಎಂದು ತಿಳಿಸಿ ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಬೂತ್ ಅಧ್ಯಕ್ಷರು, ಬಿ.ಎಲ್.ಏ-2, ವಾರ್ಡಿನ ಪ್ರಮುಖರಾದ ಮ್ಯಾಕ್ಸಿಮ್ ಡಿ’ಸೋಜಾ, ಕೃಷ್ಣಾನಂದ ಪೈ, ಅನಂತಕೃಷ್ಣ ಪ್ರಭು, ಮಲ್ಲೇಶ್, ಲಿಖಿತ್, ಗೀತಾ ರವಿ, ಶಹನವಾಝ್, ವಿನಯ ಕರ್ಕಡಾ, ಶುಶಾಂತ್ ಸಾಲಿನ್ಸ್, ಶೋಭಾ ಭಂಡಾರಿ, ಶಾಂತಾ, ರಮೇಶ್ ರಘುರಾಮ್ ಮೆಂಡನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು


Spread the love
Subscribe
Notify of

0 Comments
Inline Feedbacks
View all comments