ಸಂವಿಧಾನ ದಿನ: ಯುವ ಸಂವಾದ
ಮಂಗಳೂರು: ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿರುವ ‘ಮೈ ಭಾರತ್’ ದಕ್ಷಿಣ ಕನ್ನಡ ಘಟಕದ ಸಹಯೋಗದೊಂದಿಗೆ ಸಂವಿಧಾನ ದಿನದ ವಿಶೇಷ ಆವೃತ್ತಿಯ ‘ವಿಕಸಿತ ಭಾರತ ಯುವ ಸಂವಾದ’ ಕಾರ್ಯಕ್ರಮವನ್ನು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್.ಡಿ.ಎಂ.) ಕಾನೂನು ಕಾಲೇಜಿನಲ್ಲಿ ಗುರುವಾರ ಆಚರಿಸಲಾಯಿತು.
ಮಂಗಳೂರಿನ ಹಿರಿಯ ವಕೀಲ ಕೆ.ಪಿ. ವಾಸುದೇವ ರಾವ್ ಅವರು ಸಂವಿಧಾನ ದಿನದ ಕುರಿತು ವಿಶೇಷ ಉಪನ್ಯಾಸ ನೀಡಿ, ಭಾರತೀಯ ಸಂವಿಧಾನದ ಮಹತ್ವ ಹಾಗೂ ‘ವಿಕಸಿತ ಭಾರತ’ ನಿರ್ಮಾಣದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳು ಯುವಜನತೆಯನ್ನು ಸಶಕ್ತಗೊಳಿಸುವ ಕುರಿತು ಮೌಲ್ಯಯುತ ವಿಚಾರಗಳನ್ನು ಹಂಚಿಕೊಂಡರು.
ಪದ್ಮಶ್ರೀ ಪುರಸ್ಕøತ ‘ಅಕ್ಷರ ಸಂತ’ ಹರೇಕಳ ಹಾಜಬ್ಬ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ, ರಾಷ್ಟ್ರ ನಿರ್ಮಾಣದ ಪಯಣದಲ್ಲಿ ನಿಸ್ವಾರ್ಥ ಹಾಗೂ ಸಹಜ ನಾಯಕತ್ವವನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.
ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದಿಂದ ‘ಯೂತ್ ಐಕಾನ್’ ಆಗಿ ನಾಮನಿರ್ದೇಶನಗೊಂಡಿರುವ ಡಾ. ಎಲಾ.ಎಸ್.ರಾವ್ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಕಾಲೇಜಿನ ಹಿರಿಯ ಪ್ರಾಧ್ಯಾಪಕ ಪೆÇ್ರ. ಮಹೇಶ್ಚಂದ್ರ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ‘ಮೈ ಭಾರತ್’ ದಕ್ಷಿಣ ಕನ್ನಡ ಘಟಕದ ಉಪನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ. ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ, ರಾಷ್ಟ್ರೀಯ ಸೇವಾ ಯೋಜನೆಯ (ಎನ್.ಎಸ್.ಎಸ್.) ‘ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ’ಗೆ ಭಾಜನರಾದ ಎಸ್.ಡಿ.ಎಂ. ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಕಾಲೇಜಿನ ವಿದ್ಯಾರ್ಥಿ ಎಸ್.ಡಿ.ಎಂ. ಹೃಷಿಕೇಶ್ ಅವರ ಸೇವೆಗಾಗಿ ಸನ್ಮಾನಿಸಲಾಯಿತು.
ಯುವಜನತೆಯಲ್ಲಿ ಸಂವಿಧಾನದ ಅರಿವು ಮೂಡಿಸುವುದು, ಪ್ರಜಾಪ್ರಭುತ್ವದ ಆದರ್ಶಗಳನ್ನು ಎತ್ತಿಹಿಡಿಯುವುದು ಹಾಗೂ ‘ನಶಾ ಮುಕ್ತ ಯುವ’ ಅಭಿಯಾನದ ಕುರಿತು ಜಾಗೃತಿ ಮೂಡಿಸುವ ಮೂಲಕ ಅಭಿವೃದ್ಧಿ ಹೊಂದಿದ ಮತ್ತು ಮಾದಕವಸ್ತು ಮುಕ್ತ ಭಾರತದ ಗುರಿಯನ್ನು ಸಾಧಿಸುವಲ್ಲಿ ಯುವಕರ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಪೆÇ್ರೀತ್ಸಾಹಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಅನಘಾ ಶೆಟ್ಟಿ ಸ್ವಾಗತಿಸಿ, ಹಿಯಾ ಬಿ. ಹೆಗ್ಡೆ ವಂದಿಸಿದರು. ಈಡನ್ ರೆಬೆಕ್ಕಾ ಕಾರ್ಯಕ್ರಮವನ್ನು ನಿರೂಪಿಸಿದರು.













