Home Mangalorean News Kannada News ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ LPG ಸಿಲಿಂಡರ್ ದರ 29 ರೂ. ಹೆಚ್ಚಳ

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ LPG ಸಿಲಿಂಡರ್ ದರ 29 ರೂ. ಹೆಚ್ಚಳ

Spread the love

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗೃಹಬಳಕೆಯ LPG ಸಿಲಿಂಡರ್ ದರ 29 ರೂ. ಹೆಚ್ಚಳ

ನವದೆಹಲಿ: ಪೆಟ್ರೋಲ್, ಡೀಸೆಲ್ ಮತ್ತು ಸಿಎನ್ಜಿ ಬೆಲೆ ಏರಿಕೆಯ ಬೆನ್ನಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್ ಬಂದೊದಗಿದ್ದು, ಗೃಹಬಳಕೆಯ ಎಲ್ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್ಗೆ 29 ರೂ. ಹೆಚ್ಚಳ ಮಾಡಲಾಗಿದೆ.

ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದೆ. ಈ ಹೊಸ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ 14.2 ಕೆಜಿ ತೂಕದ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ನಿರಂತರ ಸಂಘರ್ಷದಿಂದಾಗಿ ಜಾಗತಿಕ ತೈಲ ಮತ್ತು ಅನಿಲ ಪೂರೈಕೆಯ ಮೇಲೆ ಭಾರಿ ಒತ್ತಡ ಉಂಟಾಗಿದೆ. ಇದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ಬೆಲೆಗಳು ಗಗನಕ್ಕೇರಲು ಪ್ರಮುಖ ಕಾರಣವಾಗಿದೆ.

ಇದಕ್ಕೂ ಮುನ್ನ, ಮಾರ್ಚ್ 7 ರಂದು ಪ್ರತಿ ಸಿಲಿಂಡರ್ ಬೆಲೆಯನ್ನು 60 ರೂ. ಹೆಚ್ಚಿಸಲಾಗಿತ್ತು. ಪ್ರಸ್ತುತ ಮಾಡಲಾದ ದರ ಏರಿಕೆಯು ತೈಲ ಕಂಪನಿಗಳಿಗೆ ದೇಶೀಯ ಎಲ್ಪಿಜಿ ಮಾರಾಟದಲ್ಲಿ ಆಗುತ್ತಿರುವ ನಷ್ಟವನ್ನು ಭಾಗಶಃ ಮಾತ್ರ ಸರಿದೂಗಿಸಿದೆ ಎಂದು ಮೂಲಗಳು ತಿಳಿಸಿವೆ.ಈ ದರ ಪರಿಷ್ಕರಣೆಯು ದೇಶಾದ್ಯಂತ ಅನ್ವಯವಾಗಲಿದ್ದರೂ, ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳ ವ್ಯತ್ಯಾಸದಿಂದಾಗಿ ಪ್ರತಿ ನಗರದಲ್ಲೂ ಸಿಲಿಂಡರ್ನ ಅಂತಿಮ ಬೆಲೆಯಲ್ಲಿ ವ್ಯತ್ಯಾಸವಿರಲಿದೆ.


Spread the love

Exit mobile version