Home Mangalorean News Kannada News ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ.ಖಾದರ್

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ.ಖಾದರ್

Spread the love

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ.ಖಾದರ್

ಬೆಂಗಳೂರು : ಹೋಟೆಲ್, ರೆಸ್ಟೋರೆಂಟ್ ಹಾಗೂ ಬೇಕರಿಗಳಲ್ಲಿ ಬಳಸಿದ ಅಡುಗೆ ಎಣ್ಣೆಯನ್ನು ಪದೇಪದೇ ಕಾಯಿಸಿ ಆಹಾರ ತಯಾರಿಸುವುದರಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳಿಗೆ ಕಡಿವಾಣ ಹಾಕಲು ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿಗೆ ತರಲು ರಾಜ್ಯ ಸರಕಾರ ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

ಗುರುವಾರ ನಗರದ ಆರೋಗ್ಯ ಸೌಧದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮೂಲಕ ಈ ವ್ಯವಸ್ಥೆ ಜಾರಿಗೆ ಬರಲಿದೆ. ಇದರಡಿ ಆಹಾರ ಉದ್ದಿಮೆದಾರರು ಬಳಸಿದ ಅಡುಗೆ ಎಣ್ಣೆಯನ್ನು ಎಫ್‍ಎಸ್‍ಎಸ್‍ಎಐ ಮಾನ್ಯತೆ ಪಡೆದ ಆರ್‍ಯುಸಿಒ ಏಜೆನ್ಸಿಗಳ ಮೂಲಕವೇ ವಿಲೇವಾರಿ ಮಾಡುವುದು ಕಡ್ಡಾಯವಾಗಲಿದೆ ಎಂದರು.

ಆ್ಯಪ್ ಮೂಲಕ ಬಳಸಿದ ಎಣ್ಣೆಯ ಸಂಗ್ರಹ, ಸಾಗಣೆ ಹಾಗೂ ವಿಲೇವಾರಿಯ ಪ್ರತಿಯೊಂದು ಹಂತದ ವಿವರ ದಾಖಲೆಯಾಗಲಿದೆ. ಇದರಿಂದ ಸಂಗ್ರಹಿಸಿದ ಎಣ್ಣೆಯನ್ನು ಮತ್ತೆ ಆಹಾರ ತಯಾರಿಕೆಗೆ ಬಳಸುವುದನ್ನು ತಡೆಯಲು ಸಾಧ್ಯವಾಗಲಿದೆ. ಉದಾಹರಣೆಗೆ, ಹೋಟೆಲ್‍ವೊಂದು 300ರಿಂದ 400 ಲೀಟರ್ ಅಡುಗೆ ಎಣ್ಣೆ ಖರೀದಿಸಿದರೆ, ಕನಿಷ್ಠ 75ರಿಂದ 100 ಲೀಟರ್ ಬಳಸಿದ ಎಣ್ಣೆ ವಾಪಸ್ ಸಂಗ್ರಹವಾಗಬೇಕು. 100 ಲೀಟರ್ ಎಣ್ಣೆಗೆ ಕನಿಷ್ಠ 15 ಲೀಟರ್ ಬಳಸಿದ ಎಣ್ಣೆಯ ಲೆಕ್ಕ ಸಿಗಬೇಕು. ಸಂಗ್ರಹಿಸಿದ ಎಣ್ಣೆಯನ್ನು ಸಣ್ಣ ಹೋಟೆಲ್‍ಗಳಿಗೆ ಮರುಮಾರಾಟ ಮಾಡುವುದನ್ನು ತಡೆಯುವುದು ಈ ವ್ಯವಸ್ಥೆಯ ಉದ್ದೇಶ ಎಂದು ಖಾದರ್ ಹೇಳಿದರು.

ಬೆಂಗಳೂರು, ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿಯಲ್ಲಿ ಆರಂಭಿಕ ಸಂಗ್ರಹ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಅಲ್ಲಿಂದ ಬಳಸಿದ ಎಣ್ಣೆಯನ್ನು ಬಯೋಡೀಸೆಲ್ ಅಥವಾ ಸೋಪ್ ತಯಾರಿಕೆಯಂತಹ ಉದ್ದೇಶಗಳಿಗೆ ಕಳುಹಿಸಲಾಗುವುದು. ಯಾವುದೇ ಕಾರಣಕ್ಕೂ ಅದು ಮತ್ತೆ ಆಹಾರ ತಯಾರಿಕೆಗೆ ಬಳಕೆಯಾಗದಂತೆ ಹಾಗೂ ಚರಂಡಿ, ಹಳ್ಳಗಳಿಗೆ ಸೇರದಂತೆ ನಿಗಾ ವಹಿಸಲಾಗುವುದು ಎಂದು ಅವರು ತಿಳಿಸಿದರು.

ಕರಿದ ಎಣ್ಣೆಯ ಗುಣಮಟ್ಟ ಪರೀಕ್ಷಿಸಲು ಇಲಾಖೆಯ ಅಧಿಕಾರಿಗಳಿಗೆ ಈಗಾಗಲೇ ಟಿಪಿಸಿ ಮೀಟರ್‍ಗಳನ್ನು ನೀಡಲಾಗಿದೆ. ಎಣ್ಣೆಯಲ್ಲಿನ ಟಿಪಿಸಿ ಪ್ರಮಾಣ 25 ಮೀರಿದರೆ ಅದನ್ನು ಅಡುಗೆಗೆ ಬಳಸುವಂತಿಲ್ಲ. 2022ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ 91 ಲಕ್ಷಕ್ಕೂ ಹೆಚ್ಚು ಲೀಟರ್ ಬಳಸಿದ ಅಡುಗೆ ಎಣ್ಣೆಯನ್ನು ಸಂಗ್ರಹಿಸಲಾಗಿದೆ. ಮುಂದಿನ ಹಂತದಲ್ಲಿ ಮನೆಗಳಲ್ಲಿ ಬಳಸುವ ಅಡುಗೆ ಎಣ್ಣೆಯ ಸಂಗ್ರಹಕ್ಕೂ ವ್ಯವಸ್ಥೆ ರೂಪಿಸಲಾಗುವುದು ಎಂದು ಸಚಿವರು ಹೇಳಿದರು.

ಹಸಿ ಕಸ ಮತ್ತು ಒಣ ಕಸ ಸಂಗ್ರಹಿಸುವ ಮಾದರಿಯಲ್ಲಿ ಮನೆಮನೆಗಳಿಂದ ಬಳಸಿದ ಎಣ್ಣೆಯನ್ನು ಸಂಗ್ರಹಿಸಿ ಸೂಕ್ತವಾಗಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ನ.25ರಂದು ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಸಭೆ ಹಾಗೂ ನ.26ರಂದು ವಿವಿಧ ರಾಜ್ಯಗಳ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳ ಸಮ್ಮೇಳನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಬಳಸಿದ ಅಡುಗೆ ಎಣ್ಣೆಯನ್ನು ಮತ್ತೆ ಆಹಾರ ತಯಾರಿಕೆಗೆ ಬಳಸುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದರೆ ಆಹಾರ ಸುರಕ್ಷತಾ ಇಲಾಖೆಯ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ದೂರು ಸಲ್ಲಿಸಬಹುದು. ಸುರಕ್ಷಿತ ಆಹಾರ ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ ಎಂದು ಯು.ಟಿ.ಖಾದರ್ ತಿಳಿಸಿದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version