Home Mangalorean News Kannada News ನಕಲಿ ಇ-ಚಲನ್ ಲಿಂಕ್ ಮೂಲಕ ಸೈಬರ್ ವಂಚನೆ:  ಸಾರ್ವಜನಿಕರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ

ನಕಲಿ ಇ-ಚಲನ್ ಲಿಂಕ್ ಮೂಲಕ ಸೈಬರ್ ವಂಚನೆ:  ಸಾರ್ವಜನಿಕರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ

Spread the love

ನಕಲಿ ಇ-ಚಲನ್ ಲಿಂಕ್ ಮೂಲಕ ಸೈಬರ್ ವಂಚನೆ:  ಸಾರ್ವಜನಿಕರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಎಚ್ಚರಿಕೆ

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಇ-ಚಲನ್ ದಂಡ ಪಾವತಿಸುವಂತೆ ಸಾರ್ವಜನಿಕರ ಮೊಬೈಲ್ ಫೋನ್ಗಳಿಗೆ SMS ಹಾಗೂ WhatsApp ಮೂಲಕ ನಕಲಿ ಲಿಂಕ್ಗಳು ಮತ್ತು APK ಫೈಲ್ಗಳನ್ನು ಕಳುಹಿಸಿ ಸೈಬರ್ ವಂಚಕರು ಹಣ ದೋಚುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.

ಈ ರೀತಿಯ ಸೈಬರ್ ವಂಚನೆಗೆ ಸಂಬಂಧಿಸಿದಂತೆ ಮಂಗಳೂರು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 2026ನೇ ಸಾಲಿನಲ್ಲಿ ಈವರೆಗೆ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ. ಈ ವಂಚನೆಯಿಂದ ಸಾರ್ವಜನಿಕರು ಸುಮಾರು 44 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಸಾರ್ವಜನಿಕರು ಇಂತಹ ವಂಚನೆಗಳ ಬಗ್ಗೆ ಹೆಚ್ಚಿನ ಜಾಗರೂಕತೆ ವಹಿಸಬೇಕು. ತಮ್ಮ ವಾಹನದ ಮೇಲೆ ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದೆಯೇ ಎಂಬುದನ್ನು ಸರ್ಕಾರದ ಅಧಿಕೃತ ಇ-ಚಲನ್ ವೆಬ್ಸೈಟ್ನಲ್ಲಿ ಅಥವಾ ಹತ್ತಿರದ ಸಂಚಾರಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರವೇ ದಂಡದ ಮೊತ್ತವನ್ನು ಪಾವತಿಸಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು:

ತಮ್ಮ ವಾಹನದ ಮೇಲೆ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ಇ-ಚಲನ್ ಬಾಕಿ ಇದೆಯೇ ಎಂಬುದನ್ನು ಸರ್ಕಾರದ ಅಧಿಕೃತ ವೆಬ್ಸೈಟ್ https://echallan.parivahan.nic.in ಮೂಲಕ ಮಾತ್ರ ಪರಿಶೀಲಿಸಬೇಕು. ದಂಡದ ಮೊತ್ತವಿದ್ದಲ್ಲಿ ಅದೇ ಅಧಿಕೃತ ವೆಬ್ಸೈಟ್ನಲ್ಲಿ ಪಾವತಿಸಬೇಕು.

ಇ-ಚಲನ್ ಸಂದೇಶದ ಬಗ್ಗೆ ಯಾವುದೇ ಸಂಶಯವಿದ್ದಲ್ಲಿ ಮಂಗಳೂರು ನಗರದ ಹತ್ತಿರದ ಸಂಚಾರಿ ಪೊಲೀಸ್ ಠಾಣೆ ಅಥವಾ ಸಂಚಾರಿ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಖಚಿತಪಡಿಸಿಕೊಳ್ಳಬೇಕು. ಅಂಚೆ ಮೂಲಕ ಇ-ಚಲನ್ ನೋಟಿಸ್ ಸ್ವೀಕರಿಸಿದ್ದಲ್ಲಿ Mangalore One ಅಥವಾ Karnataka One ನ ಅಧಿಕೃತ ವೆಬ್ಸೈಟ್ ಅಥವಾ ಆ್ಯಪ್ ಮೂಲಕ ದಂಡ ಪಾವತಿಸಬಹುದು.

ಮೊಬೈಲ್ ಫೋನ್ಗೆ ಬರುವ ಯಾವುದೇ APK ಫೈಲ್ಗಳನ್ನು ಡೌನ್ಲೋಡ್ ಮಾಡಬಾರದು ಅಥವಾ ಇನ್ಸ್ಟಾಲ್ ಮಾಡಬಾರದು. ಅಪರಿಚಿತ ವ್ಯಕ್ತಿಗಳಿಂದ ಬರುವ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು. ಇ-ಚಲನ್ ದಂಡ ಪಾವತಿಸುವಂತೆ ಬರುವ ಅಪರಿಚಿತ ಲಿಂಕ್ಗಳ ಮೂಲಕ ಬ್ಯಾಂಕ್ ಖಾತೆ ವಿವರಗಳು, ಎಟಿಎಂ ಕಾರ್ಡ್ ಮಾಹಿತಿ, ಒಟಿಪಿ ಅಥವಾ ಇತರ ವೈಯಕ್ತಿಕ ಮಾಹಿತಿಗಳನ್ನು ಹಂಚಿಕೊಳ್ಳಬಾರದು.

ಅಧಿಕೃತ ವೆಬ್ಸೈಟ್ಗಳಂತೆ ಕಾಣುವ ನಕಲಿ ವೆಬ್ಸೈಟ್ಗಳ ಬಗ್ಗೆಯೂ ಎಚ್ಚರಿಕೆ ವಹಿಸಬೇಕು. ವೆಬ್ಸೈಟ್ ವಿಳಾಸದಲ್ಲಿ ‘https://’ ಇದೆ ಎಂಬ ಕಾರಣಕ್ಕೆ ಮಾತ್ರ ಅದನ್ನು ಅಧಿಕೃತ ವೆಬ್ಸೈಟ್ ಎಂದು ನಂಬಬಾರದು ಎಂದು ಪೊಲೀಸರು ಎಚ್ಚರಿಸಿದ್ದಾರೆ.

ಸಾರ್ವಜನಿಕರು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಇಂತಹ ಸೈಬರ್ ವಂಚನೆಗಳಿಂದ ಸುರಕ್ಷಿತರಾಗಿರಬೇಕು. ಮೊಬೈಲ್ ಫೋನ್ಗೆ ಬರುವ ಇ-ಚಲನ್ ದಂಡ ಪಾವತಿ ಸಂದೇಶದ ಬಗ್ಗೆ ಯಾವುದೇ ಅನುಮಾನವಿದ್ದಲ್ಲಿ 0824-2220823 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಖಚಿತಪಡಿಸಿಕೊಳ್ಳಬಹುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version