ರಸ್ತೆ ಡಿವೈಡರ್‌ಗಳ ಫ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ.ಜಿಲ್ಲಾಧಿಕಾರಿ ಸೂಚನೆ

Spread the love

ರಸ್ತೆ ಡಿವೈಡರ್‌ಗಳ ಫ್ಲೆಕ್ಸ್, ಬ್ಯಾನರ್ ತೆರವಿಗೆ ದ.ಕ.ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ದ.ಕ.ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್‌ಗಳ ಮೇಲೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ದ.ಕ.ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ಸಹಿತ ಜಿಲ್ಲೆಯ ಎಲ್ಲಾ ನಗರ ಸ್ಥಳೀಯಾಡಳಿತ ಸಂಸ್ಥೆ ಹಾಗೂ ಗ್ರಾಪಂ ವ್ಯಾಪ್ತಿಯ ರಸ್ತೆಯ ಡಿವೈಡರ್‌ಗಳ ಮೇಲೆ ಅಪಾಯಕಾರಿ ಹಾಗೂ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸ ಲಾಗಿದೆ. ಇದರಿಂದ ರಸ್ತೆ ದಾಟುವವರಿಗೆ ಮತ್ತು ವಾಹನಿಗರಿಗೆ ಸಮಸ್ಯೆಯಾಗಿದೆ. ಅಪಘಾತಕ್ಕೂ ಕಾರಣವಾಗಿದೆ. ಈ ಬಗ್ಗೆ ಈಗಾಗಲೆ ಜಿಲ್ಲಾಡಳಿತಕ್ಕೆ ಸಾಕಷ್ಟು ದೂರುಗಳೂ ಬಂದಿವೆ. ರಸ್ತೆ ಸುರಕ್ಷಾ ಸಮಿತಿಯ ಸಭೆಯಲ್ಲೂ ವಿಸ್ತೃತ ಚರ್ಚೆ ನಡೆದಿದೆ. ಹಾಗಾಗಿ ತಕ್ಷಣ ಎಲ್ಲಾ ಫ್ಲೆಕ್ಸ್ ಬ್ಯಾನರ್‌ಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.


Spread the love
Subscribe
Notify of

0 Comments