Home Mangalorean News Kannada News ಅಡುಗೆ ಅನಿಲ ಬೆಲೆ ಏರಿಕೆಯ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ಅಡುಗೆ ಅನಿಲ ಬೆಲೆ ಏರಿಕೆಯ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

Spread the love

ಅಡುಗೆ ಅನಿಲ ಬೆಲೆ ಏರಿಕೆಯ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಅಡುಗೆ ಅನಿಲ ಬೆಲೆ ಏರಿಕೆ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವೈಫಲ್ಯವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಬುಧವಾರ ನಗರದ ಕದ್ರಿ ಸರ್ಕಲ್ ಬಳಿ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಖಾಲಿ ಗ್ಯಾಸ್ ಸಿಲಿಂಡರ್‌ಗೆ ಹೂಮಾಲೆ ಹಾಕಿ ಅದನ್ನು ಚಟ್ಟದ ಮೇಲೆ ಕಟ್ಟಿ ಕಾಂಗ್ರೆಸ್ ಕಾರ್ಯ ಕರ್ತರು ಹೊತ್ತುಕೊಂಡು ಕದ್ರಿ ಸರ್ಕಲ್ ಬಳಿ ಅಣಕು ಶವಯಾತ್ರೆ ನಡೆಸಿ ಸಾರ್ವಜನಿಕರ ಗಮನ ಸೆಳೆದರು. ಗ್ಯಾಸ್ ಸ್ಟೌ ಮತ್ತು ಖಾಲಿ ಪಾತ್ರೆಯನ್ನೂ ಪ್ರತಿಭಟನಾಕಾರರು ಪ್ರದರ್ಶಿಸಿದರು.

ಮಾಜಿ ಸಚಿವ ರಮಾನಾಥ ರೈ ಮಾತನಾಡಿ ಕೇಂದ್ರ ಸರಕಾರದ ವೈಫಲ್ಯದಿಂದ ದೇಶದಲ್ಲಿ ಅಡುಗೆ ಅನಿಲ ಸರಿಯಾಗಿ ಪೂರೈಕೆಯಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾ ಗುತ್ತಿದೆ. ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ ನೀತಿಯೇ ಇದಕ್ಕೆ ಕಾರಣ ಎಂದು ಆರೋಪಿಸಿದರು.

ದೇಶದ ಆರ್ಥಿಕ ಪ್ರಸಕ್ತ ಪರಿಸ್ಥಿತಿ ಚೆನ್ನಾಗಿಲ್ಲ. ಬೆಲೆ ಏರಿಕೆಯಿಂದ ಜನರು ಕೂಡ ಕಂಗಾಲಾಗಿದ್ದಾರೆ. ಆದರೂ ಕೂಡ ಬಿಜೆಪಿಗರು ಸುಳ್ಳು ಹೇಳುತ್ತಾ ಜನರನ್ನು ತಪ್ಪು ದಾರಿಗೆ ತಳ್ಳುತಿದ್ದಾರೆ. ಹಾಗಾಗಿ ಇದನ್ನು ಜನಸಾಮಾನ್ಯರು ಅರ್ಥ ಮಾಡಿಕೊಳ್ಳಬೇಕು. ನಿರಂತರ ಬೆಲೆ ಏರಿಕೆಯಾಗುತ್ತಿದ್ದರೂ ಕೂಡ ಪ್ರಧಾನಿ ಸುಳ್ಳುಗಳನ್ನು ಹೇಳುತ್ತಾ ಜನರನ್ನು ವಂಚಿಸುತ್ತಿದ್ದಾರೆ ಎಂದು ರಮಾನಾಥ ರೈ ಹೇಳಿದರು.

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ ಅಡುಗೆ ಅನಿಲದ ಬೆಲೆಯು ಕಾಳಸಂತೆಯಲ್ಲಿ ನಾಲ್ಕೈದು ಸಾವಿರ ರೂ.ಗೆ ಏರಿಕೆಯಾಗಿದೆ. ಪರಿಣಾಮ ಹೊಟೇಲ್‌ಗಳಲ್ಲಿ ತಿಂಡಿ ತಿನಿಸು, ಊಟದ ದರದಲ್ಲೂ ವಿಪರೀತ ಏರಿಕೆಯಾಗಿದೆ. ಆಟೊ ರಿಕ್ಷಾಗಳಿಗೆ ಎಲ್‌ಪಿಜಿ ಸಿಗದೆ ಚಾಲಕರು ಪರದಾಡುವಂತಾಗಿದೆ. ಇದಕ್ಕೆ ಬಿಜೆಪಿ, ಕೇಂದ್ರ ಸರಕಾರವೇ ಕಾರಣವಾಗಿದೆ. ನರೇಂದ್ರ ಮೋದಿ ದೇಶದ ಅತ್ಯಂತ ದುರ್ಬಲ ಪ್ರಧಾನಿ ಎಂಬುದನ್ನು ಈ ಮೂಲಕ ಸಾಬೀತುಪಡಿಸಿದ್ದಾರೆ ಎಂದು ಆರೋಪಿಸಿದರು.

ಅಧ್ಯಕ್ಷತೆ ವಹಿಸಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್ ಮಾತನಾಡಿ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದರು.

ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಬಶೀರ್, ಸುನೀತ್ ದೇಸಾಯಿ, ಮುಖಂಡರಾದ ಫಾರೂಕ್ ಪೆರ್ನೆ, ಆಸೀಫ್ ಬಜಾಲ್, ಸಮರ್ಥ್ ಭಟ್, ಪೃಥ್ವಿರಾಜ್, ಮೆಲ್ವಿನ್, ಚೇತನ್, ಮಹೇಶ್, ಪ್ರಜ್ವಲ್ ಮತ್ತಿತರರು ಪಾಲ್ಗೊಂಡಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version