ದಾವಣಗೆರೆ ಉಪಚುನಾವಣೆ: ಸಮರ್ಥ ಮಲ್ಲಿಕಾರ್ಜುನ ಗೆಲ್ಲಿಸಲು– ಪ್ರಶಾಂತ ಜತ್ತನ್ನ ಕರೆ 

Spread the love

ದಾವಣಗೆರೆ ಉಪಚುನಾವಣೆ: ಸಮರ್ಥ ಮಲ್ಲಿಕಾರ್ಜುನ ಗೆಲ್ಲಿಸಲು– ಪ್ರಶಾಂತ ಜತ್ತನ್ನ ಕರೆ 

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಕ್ರೈಸ್ತ ಮುಖಂಡರ ಸಭೆ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಮಲ್ಲಿಕಾರ್ಜುನ ಅವರನ್ನು ಗೆಲ್ಲಿಸಲು ಕರ್ನಾಟಕ ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಪ್ರಶಾಂತ ಜತ್ತನ್ನ ಕರೆ ನೀಡಿದ್ದಾರೆ.

ದಾವಣಗೆರೆಯ ಸಿ.ಎಸ್.ಐ ಕ್ರಾಂತಿ ಚರ್ಚ್ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ವಿಶೇಷವಾಗಿ ಕ್ರೈಸ್ತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಜಿಲ್ಲೆಯ ದಿವಂಗತ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ ಅವರು ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಎಲ್ಲಾ ಕ್ರೈಸ್ತ ಪಂಗಡ ಹಾಗೂ ಉಪಪಂಗಡಗಳ ಮತದಾರರು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಮಲ್ಲಿಕಾರ್ಜುನ ಅವರಿಗೆ ತಮ್ಮ ಅಮೂಲ್ಯ ಮತ ನೀಡಿ ಅವರನ್ನು ಜಯಶಾಲಿಗಳಾಗಿಸಬೇಕು ಎಂದು ಅವರು ಮನವಿ ಮಾಡಿದರು. ಕ್ಷೇತ್ರದಲ್ಲಿ ಮತ್ತೊಬ್ಬ ಕ್ರೈಸ್ತ ಅಭ್ಯರ್ಥಿ ಸ್ಪರ್ಧಿಸುತ್ತಿದ್ದರೂ ಮತವನ್ನು ವ್ಯರ್ಥ ಮಾಡದೇ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕೋರಿದರು.

ಸಭೆಯಲ್ಲಿ ಹಿರಿಯ ನಾಯಕರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್, ಸಚಿವ ರಹೀಮ್ ಖಾನ್, ವಿಧಾನ ಪರಿಷತ್ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಶಾಲೆಟ್ ಪಿಂಟೋ, ಸೂಡಾ ನಿರ್ದೇಶಕ ಫ್ರಾನ್ಸಿಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ಡಾ. ಪ್ರದೀಪ್ ಡಿ ಮೆಲ್ಲೋ, ಎಂ.ಎಸ್. ಮೊಹಮ್ಮದ್ ಪುತ್ತೂರು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.


Spread the love
Subscribe
Notify of

0 Comments
Inline Feedbacks
View all comments