Home Mangalorean News Kannada News ಉಡುಪಿ – ಉಚ್ಚಿಲ ದಸರಾ–2026 ಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅಧಿಕೃತ ಚಾಲನೆ

ಉಡುಪಿ – ಉಚ್ಚಿಲ ದಸರಾ–2026 ಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅಧಿಕೃತ ಚಾಲನೆ

Spread the love

ಉಡುಪಿ – ಉಚ್ಚಿಲ ದಸರಾ–2026 ಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅಧಿಕೃತ ಚಾಲನೆ

ಉಡುಪಿ: ಕರಾವಳಿಯ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿರುವ ಉಡುಪಿ ಉಚ್ಚಿಲ ದಸರಾ–2026ಕ್ಕೆ ಅಧಿಕೃತ ಚಾಲನೆ ಭಾನುವಾರ ನೀಡಲಾಯಿತು

ಶ್ರೀ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಆಯೋಜಿಸಲಾಗುತ್ತಿರುವ ದಸರಾ ಮಹೋತ್ಸವ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದು, ಈ ಬಾರಿ ಐದನೇ ವರ್ಷದ ಉತ್ಸವವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ.

ಅಕ್ಟೋಬರ್ 11ರಿಂದ 21ರವರೆಗೆ 11 ದಿನಗಳ ಕಾಲ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿಕೆ ಚಾಲನೆ ನೀಡಿದರು

ಈ ವೇಳೆ ಜಿಲ್ಲಾಧಿಕಾರಿ ಸ್ವರೂಪಾ ಟಿ ಕೆ ಮಾತನಾಡಿ ನಮ್ಮಲ್ಲಿರುವ ಧೈರ್ಯ, ಶಕ್ತಿ ಮತ್ತು ಜ್ಞಾನವನ್ನು ಜಾಗೃತಿಗೊಳಿಸಿ, ನಮ್ಮೊಳಗಿನ ಸಾಮರ್ಥ್ಯವನ್ನು ಗುರುತಿಸಿಕೊಳ್ಳಲು ನವರಾತ್ರಿ ಹಬ್ಬ ಪ್ರೇರಣೆ ನೀಡುತ್ತದೆ. ದೇವಿಯ ಆರಾಧನೆಯ ಮೂಲಕ ಆಕೆಯ ಆಶೀರ್ವಾದವನ್ನು ಪಡೆದು, ಜೀವನದಲ್ಲಿ ಸಕಾರಾತ್ಮಕತೆ ಹಾಗೂ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳುವ ಪವಿತ್ರ ಹಬ್ಬವೇ ನವರಾತ್ರಿ. ನಮ್ಮೊಳಗಿನ ಶಕ್ತಿಯನ್ನು ಅರಿತು, ಅದನ್ನು ಸದುಪಯೋಗಪಡಿಸಿಕೊಳ್ಳುವ ಸಂಕಲ್ಪದೊಂದಿಗೆ ದೇವಿಯ ಕೃಪೆಗೆ ಪಾತ್ರರಾಗೋಣ ಎಂದರು.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ 2021ರಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೊಸ ರೂಪ ನೀಡಲಾಗಿದ್ದು, ಜಿ. ಶಂಕರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಉಚ್ಚಿಲ ದಸರಾ ಇಂದು ವಿಶೇಷ ಖ್ಯಾತಿಯನ್ನು ಪಡೆದಿದೆ. ನವರಾತ್ರಿಯ ಈ ಪವಿತ್ರ ಒಂಬತ್ತು ದಿನಗಳಲ್ಲಿ ದೇವಿಯ ಆರಾಧನೆ ಮಾಡಿ, ಆಕೆಯ ಕೃಪೆಗೆ ಪಾತ್ರರಾಗೋಣ. ಶ್ರೀ ದೇವಿಯು ಎಲ್ಲರಿಗೂ ಆಯುರಾರೋಗ್ಯ, ಸುಖ, ಶಾಂತಿ ಮತ್ತು ಸಮೃದ್ಧಿಯನ್ನು ಕರುಣಿಸಲಿ ಎಂದು ಹಾರೈಸೋಣ ಎಂದರು.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ಮೈಸೂರು, ಮಂಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ, ಉಡುಪಿ ಜಿಲ್ಲೆಯಲ್ಲಿ ಇಂತಹ ಅದ್ಧೂರಿ ದಸರಾ ಆಚರಣೆಯ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಡೋಜ ಡಾ. ಜಿ. ಶಂಕರ್ ಅವರ ನೇತೃತ್ವದಲ್ಲಿ ದಸರಾ ಉತ್ಸವವನ್ನು ವೈಭವದಿಂದ ಆಚರಿಸಲಾಗುತ್ತಿದೆ.

ಉಚ್ಚಿಲ ದಸರಾ ಪ್ರತಿವರ್ಷ ಹುಣ್ಣಿಮೆಯ ಚಂದ್ರನಂತೆ ಕಳೆಗಟ್ಟುತ್ತಿದ್ದು, ವರ್ಷದಿಂದ ವರ್ಷಕ್ಕೆ ಉತ್ಸವದ ಸಂಭ್ರಮ ಹೆಚ್ಚುತ್ತಿದೆ. ಧಾರ್ಮಿಕ ಆಚರಣೆಗಳ ಜೊತೆಗೆ ವಿವಿಧ ಕಾರ್ಯಕ್ರಮಗಳ ಮೂಲಕ ಈ ದಸರಾ ಕರಾವಳಿಯ ಜನರ ಗಮನ ಸೆಳೆಯುತ್ತಿದೆ.

ನಾಳೆ ನಡೆಯಲಿರುವ ಮಹಿಳಾ ದಸರಾ ಕಾರ್ಯಕ್ರಮವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಬೇಕಿತ್ತು. ಆದರೆ, ತುರ್ತು ಕೆಲಸದ ನಿಮಿತ್ತ ದೆಹಲಿಗೆ ತೆರಳಬೇಕಾಗಿರುವುದರಿಂದ ಅವರು ನಾಳಿನ ಕಾರ್ಯಕ್ರಮಕ್ಕೆ ಆಗಮಿಸಲು ಸಾಧ್ಯವಾಗುತ್ತಿಲ್ಲ. ಅಕ್ಟೋಬರ್ 21ರೊಳಗೆ ಉಚ್ಚಿಲಕ್ಕೆ ಭೇಟಿ ನೀಡುವುದಾಗಿ ಅವರು ತಿಳಿಸಿದ್ದಾರೆ ಎಂದು ಮಾಹಿತಿ ಲಭಿಸಿದೆ.

ಈ ಬಾರಿಯೂ ಉಚ್ಚಿಲ ದಸರಾ ಉತ್ಸವವು ಅದೇ ಸಡಗರ, ಸಂಭ್ರಮ ಮತ್ತು ಭಕ್ತಿಭಾವದೊಂದಿಗೆ ನಡೆಯಲಿ. ಶ್ರೀ ಮಹಾಲಕ್ಷ್ಮೀ ದೇವಿಯ ಆಶೀರ್ವಾದ ಎಲ್ಲರಿಗೂ ಲಭಿಸಿ, ನಾಡಿನ ಜನತೆಗೆ ಸುಖ, ಶಾಂತಿ ಮತ್ತು ಸಮೃದ್ಧಿ ದೊರೆಯಲಿ ಎಂದರು.

ಉಚ್ಚಿಲ ದಸರಾ ರೂವಾರಿ ನಾಡೋಜ ಡಾ. ಜಿ ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ ಉಚ್ಚಿಲ ದಸರಾದ 9 ದಿನಗಳ ಕಾರ್ಯಕ್ರಮದ ಮಾಹಿತಿ ನೀಡಿದರು.

ದಸರಾ ವಸ್ತುಪ್ರದರ್ಶನ ಕಾರ್ಯಕ್ರಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹರಿರಾಮ್ ಶಂಕರ್ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್ ದಸರಾ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಕರ್ಕೆರಾ, ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಪದಾಧಿಕಾರಿಗಳಾದ ಗಿರಿಧರ್ ಎಸ್ ಸುವರ್ಣ, ಸತೀಶ್ ಅಮೀನ್ ಪಡುಕೆರೆ ಹಾಗೂ ಇತರರು ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version