ಧರ್ಮಸ್ಥಳ: ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ ಆರೋಪ: ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Spread the love

ಧರ್ಮಸ್ಥಳ: ರಕ್ಷಿತಾರಣ್ಯಕ್ಕೆ ಅಕ್ರಮ ಪ್ರವೇಶ ಆರೋಪ: ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ಲಗುಡ್ಡೆ ರಕ್ಷಿತಾರಣ್ಯಕ್ಕೆ ಪೂರ್ವಾನುಮತಿ ಪಡೆಯದೆ ಪ್ರವೇಶಿಸಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಹಿನ್ನೆಲೆಯಲ್ಲಿ, ಇಬ್ಬರು ಯುವಕರು ಯಾವುದೇ ಪೂರ್ವಾನುಮತಿ ಪಡೆಯದೆ ರಕ್ಷಿತಾರಣ್ಯ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯು ಅವರ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.

ಇಬ್ಬರು ಯುವಕರು ಪೊಲೀಸ್ ಠಾಣೆಗೆ ಬಂದ ಸಂದರ್ಭದಲ್ಲಿ, ತಮ್ಮ ಮೇಲೆ ಯಾವುದೇ ಹಲ್ಲೆ ಅಥವಾ ತೊಂದರೆ ಉಂಟಾಗಿದ್ದಲ್ಲಿ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ. ಈ ಕುರಿತು ಚರ್ಚಿಸಿ, ಅಗತ್ಯವಿದ್ದಲ್ಲಿ ದೂರು ನೀಡುವುದಾಗಿ ಯುವಕರು ತಿಳಿಸಿದ್ದಾರೆ.

ಸದ್ಯ ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ.


Spread the love
Subscribe
Notify of

0 Comments