ಮಸೀದಿ ವಿಚಾರದಲ್ಲಿ ತಕರಾರು: ಉಳ್ಳಾಲದಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ, 3 ಪ್ರಕರಣ ದಾಖಲು
ಮಂಗಳೂರು: ಉಳ್ಳಾಲದ ಸಜಿಪ ಪಡು ತಲೆಮೊಗರು ಮಸೀದಿ ಬಳಿ ಇತ್ತಂಡಗಳ ನಡುವೆ ಮಾರಾಮಾರಿ ನಡೆದ ಘಟನೆ ವರದಿಯಾಗಿದೆ.
ಮಸೀದಿ ಸಂಬಂಧಿತ ವಿಚಾರದಲ್ಲಿ ಉಂಟಾದ ತಕರಾರಿನಿಂದ ಎರಡು ಗುಂಪಿನವರು ತಲವಾರು, ದೊಣ್ಣೆ ಹಾಗೂ ಕಬ್ಬಿಣದ ರಾಡ್ ಬಳಸಿಕೊಂಡು ಪರಸ್ಪರ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ಸೇರಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿವೆ. ಬಿಎನ್ಎಸ್ ಮತ್ತು ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
